ADVERTISEMENT

ಬಿಹಾರ | ಜಿತಿಯಾ ವ್ರತ: ನದಿಯಲ್ಲಿ ಮುಳುಗಿ 46 ಮಂದಿ ಸಾವು

​ಪ್ರಜಾವಾಣಿ ವಾರ್ತೆ
Published 26 ಸೆಪ್ಟೆಂಬರ್ 2024, 15:36 IST
Last Updated 26 ಸೆಪ್ಟೆಂಬರ್ 2024, 15:36 IST
<div class="paragraphs"><p>‘ಜೀವಿತಪುತ್ರಿಕಾ’ ಉತ್ಸವ ಅಂಗವಾಗಿ ಬಿಹಾರದ ಔರಂಗಾಬಾದ್‌ ಜಿಲ್ಲೆಯಲ್ಲಿ ನದಿಯಲ್ಲಿ ಸ್ನಾನ ಮಾಡುವ ವೇಳೆ ಮುಳುಗಿ ಮೃತಪಟ್ಟವರ ಕುಟುಂಬದ ಸದಸ್ಯರು ರೋದಿಸುತ್ತಿರುವುದು&nbsp; </p></div>

‘ಜೀವಿತಪುತ್ರಿಕಾ’ ಉತ್ಸವ ಅಂಗವಾಗಿ ಬಿಹಾರದ ಔರಂಗಾಬಾದ್‌ ಜಿಲ್ಲೆಯಲ್ಲಿ ನದಿಯಲ್ಲಿ ಸ್ನಾನ ಮಾಡುವ ವೇಳೆ ಮುಳುಗಿ ಮೃತಪಟ್ಟವರ ಕುಟುಂಬದ ಸದಸ್ಯರು ರೋದಿಸುತ್ತಿರುವುದು 

   

ಪಿಟಿಐ ಚಿತ್ರ 

ಪಟ್ನಾ: ‘ಜಿತಿಯಾ ವ್ರತ’ ಅಂಗವಾಗಿ ಬಿಹಾರದಲ್ಲಿ ನದಿಗಳಲ್ಲಿ ಸ್ನಾನ ಮಾಡುವ ವೇಳೆ ಸಂಭವಿಸಿದ ಪ್ರತ್ಯೇಕ ಅವಘಡಗಳಲ್ಲಿ 37 ಮಕ್ಕಳು ಸೇರಿದಂತೆ 46 ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

ADVERTISEMENT

ಮೂವರು ಮೃತದೇಹಗಳು ಪತ್ತೆಯಾಗಿದ್ದು, ಉಳಿದವರ ಶವಗಳಿಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಕೆಲ ದಿನಗಳ ಹಿಂದೆ ಸುರಿದ ಭಾರಿ ಮಳೆಯಿಂದ ಅನೇಕ ನದಿಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಅಪಾಯದ ಮಟ್ಟ ಮೀರಿ ನೀರು ಹರಿಯುತ್ತಿರುವುದನ್ನು ನಿರ್ಲಕ್ಷಿಸಿದ ಜನರು ಹಬ್ಬದ ಅಂಗವಾಗಿ ಸ್ನಾನಕ್ಕೆ ಮುಂದಾಗಿದ್ದೇ ಅವಘಡಕ್ಕೆ ಕಾರಣ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಕ್ಕಳ ಶ್ರೇಯೋಭಿವೃದ್ಧಿಗೆ ಪ್ರಾರ್ಥಿಸಿ ‘ಜಿತಿಯಾ ವ್ರತ’ ಅಥವಾ ‘ಜೀವಿತಪುತ್ರಿಕಾ’ ಉತ್ಸವವನ್ನು ಆಚರಿಸಲಾಗುತ್ತದೆ.

ನೆರೆ ರಾಜ್ಯಗಳಾದ ಉತ್ತರ ಪ್ರದೇಶ, ಜಾರ್ಖಂಡ್ ಹಾಗೂ ನೇಪಾಳದ ದಕ್ಷಿಣ ಪ್ರದೇಶಗಳಲ್ಲಿಯೂ ಈ ವ್ರತವನ್ನು ಆಚರಿಸಲಾಗುತ್ತದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.