ಪುಣೆ: ಪುಣೆಯ ನಾವಲೆ ಸೇತುವೆಯಲ್ಲಿ ನಿಯಂತ್ರಣ ಕಳೆದುಕೊಂಡ ಟ್ರಕ್, ಹಲವಾರು ವಾಹನಗಳಿಗೆ ಡಿಕ್ಕಿ ಹೊಡೆದು ಕನಿಷ್ಠ 15 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಭಾನುವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ 48 ವಾಹನಗಳು ಜಖಂ ಆಗಿವೆ ಎಂದು ಪುಣೆ ಮಹಾನಗರ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ (ಪಿಎಂಆರ್‌ಡಿಎ) ಅಗ್ನಿಶಾಮಕ ದಳ ತಿಳಿಸಿದೆ.
ಇದನ್ನೂ ಓದಿ:ಬಿಹಾರ ಅಪಘಾತ; ಪ್ರಧಾನಿ ಮೋದಿ ಸಂತಾಪ; ಮೃತರ ಕುಟುಂಬಕ್ಕೆ ತಲಾ ₹2 ಲಕ್ಷ ಘೋಷಣೆ
ಸ್ಥಳೀಯ ಮಾಧ್ಯಮಗಳ ಪ್ರಕಾರ ಸೇತುವೆಯಲ್ಲಿ ಕೆಳಮುಖವಾದ ಇಳಿಜಾರಿನಲ್ಲಿ ಟ್ರಕ್ ಬ್ರೇಕ್ ಫೇಲ್ ಆಗಿರುವುದು ಅಪಘಾತಕ್ಕೆ ಕಾರಣ ಎನ್ನಲಾಗಿದೆ.
ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.