ADVERTISEMENT

ಮಹಾರಾಷ್ಟ್ರ: ಒಂದೇ ದಿನ 49 ಮಂದಿ ಪೊಲೀಸರಿಗೆ ಕೋವಿಡ್ ಪಾಸಿಟಿವ್‌

ಏಜೆನ್ಸೀಸ್
Published 11 ನವೆಂಬರ್ 2020, 12:24 IST
Last Updated 11 ನವೆಂಬರ್ 2020, 12:24 IST
ವೈದ್ಯರು ಪೊಲೀಸರಿಗೆ ಆರೋಗ್ಯ ತಪಾಸಣೆ ನಡೆಸಿದರು. –ಪಿಟಿಐ ಚಿತ್ರ
ವೈದ್ಯರು ಪೊಲೀಸರಿಗೆ ಆರೋಗ್ಯ ತಪಾಸಣೆ ನಡೆಸಿದರು. –ಪಿಟಿಐ ಚಿತ್ರ   

ಮುಂಬೈ: ನಗರದಲ್ಲಿ 24 ಗಂಟೆಗಳ ಅವಧಿಯಲ್ಲಿ 49 ಪೊಲೀಸ್ ಸಿಬ್ಬಂದಿಗೆ ಕೋವಿಡ್‌ ಪಾಸಿಟಿವ್‌ ಬಂದಿದೆ.

ಇದರೊಂದಿಗೆ ರಾಜ್ಯದಲ್ಲಿ 27,104 ಪೊಲೀಸ್‌ ಸಿಬ್ಬಂದಿಗೆ ಸೋಂಕು ತಗುಲಿದೆ. ಈವರೆಗೆ 288 ಮಂದಿ ಮೃತಪಟ್ಟಿದ್ದಾರೆ.ಇದುವರೆಗೆ 25,679 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಪೊಲೀಸ್‌ ಇಲಾಖೆ ಮಾಹಿತಿ ನೀಡಿದೆ.

ದೇಶದಲ್ಲಿ ಹೆಚ್ಚು ಪ್ರಕರಣಗಳನ್ನು ಹೊಂದಿರುವ ಮಹಾರಾಷ್ಟ್ರದಲ್ಲಿ ಈವರೆಗೆ 17.14 ಲಕ್ಷ ಪ್ರಕರಣಗಳು ದಾಖಲಾಗಿದ್ದು, 45,435 ಮಂದಿ ಸಾವಿಗೀಡಾಗಿದ್ದಾರೆ.

ADVERTISEMENT

ದೇಶದಲ್ಲಿ ಇದುವರೆಗೆ 86,36,011 ಪ್ರಕರಣಗಳು ದೃಢಪಟ್ಟಿದ್ದು, ಆ ಪೈಕಿ 1,27,615 ಮಂದಿ ಮೃತಪಟ್ಟಿದ್ದಾರೆ. ಈವರೆಗೆ 80,13,783 ಮಂದಿ ಗುಣಮುಖರಾಗಿದ್ದಾರೆ. ಸದ್ಯ 4,94,613 ಸಕ್ರಿಯ ಪ್ರಕರಣಗಳು ದಾಖಲಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.