ADVERTISEMENT

ಅರುಣಾಚಲ ಪ್ರದೇಶದಲ್ಲಿ 5.7 ತೀವ್ರತೆಯ ಭೂಕಂಪ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 10 ನವೆಂಬರ್ 2022, 6:37 IST
Last Updated 10 ನವೆಂಬರ್ 2022, 6:37 IST
ಚಿತ್ರ ಕೃಪೆ: Twitter/@NCS_Earthquake
ಚಿತ್ರ ಕೃಪೆ: Twitter/@NCS_Earthquake   

ಇಟಾನಗರ: ಅರುಣಾಚಲ ಪ್ರದೇಶದ ಪಶ್ಚಿಮ ಸಿಯಾಂಗ್ ಜಿಲ್ಲೆಯಲ್ಲಿ ಗುರುವಾರ ಬೆಳಿಗ್ಗೆ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪ ಕೇಂದ್ರ (ಎನ್‌ಸಿಎಸ್) ತಿಳಿಸಿದೆ.

ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 5.7ರಷ್ಟಿತ್ತು.

ಗುರುವಾರ ಬೆಳಿಗ್ಗೆ 10.30ರ ಸುಮಾರಿಗೆ ಕಂಪನ ಸಂಭವಿಸಿದೆ. 10 ಕಿ.ಮೀ. ಆಳದಲ್ಲಿ ಕಂಪನದ ಕೇಂದ್ರ ಬಿಂದು ಗುರುತಿಸಲಾಗಿದೆ.

ADVERTISEMENT

ಬುಧವಾರ ರಾತ್ರಿ ಅಂಡಮಾನ್‌ ಮತ್ತು ನಿಕೋಬರ್ ದ್ವೀಪ ಸಮೂಹದ ರಾಜಧಾನಿ ಫೋರ್ಟ್ ಬ್ಲೇರ್‌ನಿಂದ ಸುಮಾರು 253 ಕಿ.ಮೀ. ದೂರದ ಆಗ್ನೇಯ ದಿಕ್ಕಿನಲ್ಲಿ ರಿಕ್ಟರ್ ಮಾಪಕದಲ್ಲಿ 4.3 ತೀವ್ರತೆಯ ಭೂಕಂಪ ಸಂಭವಿಸಿತ್ತು.

ಬುಧವಾರ ನೇಪಾಳದಲ್ಲಿ ಸಂಭವಿಸಿದ 6.3 ತೀವ್ರತೆಯ ಭೂಕಂಪದಲ್ಲಿ ಆರು ಮಂದಿ ಮೃತಪಟ್ಟಿದ್ದರು. ಹಲವು ಮನೆಗಳು ನೆಲಸಮಗೊಂಡಿದ್ದವು. ಭೂಕಂಪದ ತೀವ್ರತೆಗೆ ನವದೆಹಲಿ ಸೇರಿದಂತೆ ಉತ್ತರ ಭಾರತದ ಹಲವು ಕಡೆಗಳಲ್ಲಿ ಕಂಪನದ ಅನುಭವವಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.