ADVERTISEMENT

ಜಮ್ಮು ಮತ್ತು ಕಾಶ್ಮೀರದಲ್ಲಿ ಮಧ್ಯಮ ತೀವ್ರತೆಯ ಭೂಕಂಪನ

ಐಎಎನ್ಎಸ್
Published 5 ಫೆಬ್ರುವರಿ 2022, 5:36 IST
Last Updated 5 ಫೆಬ್ರುವರಿ 2022, 5:36 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಶನಿವಾರ 5.7 ತೀವ್ರತೆಯ ಭೂಕಂಪನ ಸಂಭವಿಸಿದೆ. ಆದರೆ ಯಾವುದೇ ಪ್ರದೇಶದಲ್ಲಿಯೂ ಸಾವು ನೋವು, ಆಸ್ತಿ ಹಾನಿ ಆದ ವರದಿಗಳಿಲ್ಲ.

‘ಶನಿವಾರ ಬೆಳಗ್ಗೆ 9.45 ಗಂಟೆಗೆ ಮಧ್ಯಮ ತೀವ್ರತೆಯ ಕಂಪನ ಸಂಭವಿಸಿದೆ’ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಅಫ್ಗಾನಿಸ್ತಾನ-ತಜಕಿಸ್ತಾನ್ ಗಡಿಯ, 181 ಕಿ.ಮೀ ಆಳದಲ್ಲಿ ಭೂಕಂಪದ ಕೇಂದ್ರಬಿಂದುವನ್ನು ಗುರತಿಸಲಾಗಿದೆ.

ADVERTISEMENT

ಕಾಶ್ಮೀರವು ಭೂಕಂಪನ ಪೀಡಿತ ಪ್ರದೇಶದಲ್ಲಿ ನೆಲೆಗೊಂಡಿದೆ. ಈ ಹಿಂದೆಯೂ ಅಲ್ಲಿ ದೊಡ್ಡ ಮಟ್ಟದ ಕಂಪನಗಳು ಸಂಭವಿಸಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.