ADVERTISEMENT

ನವದೆಹಲಿ: ಜಾರಿ ನಿರ್ದೇಶನಾಲಯದ ಐವರಿಗೆ ಕೋವಿಡ್-19 ದೃಢ

ಏಜೆನ್ಸೀಸ್
Published 6 ಜೂನ್ 2020, 6:16 IST
Last Updated 6 ಜೂನ್ 2020, 6:16 IST
ಜಾರಿ ನಿರ್ದೇಶನಾಲಯ
ಜಾರಿ ನಿರ್ದೇಶನಾಲಯ   

ನವದೆಹಲಿ: ಖಾನ್ ಮಾರುಕಟ್ಟೆಯ ಲೋಕ ನಾಯಕ ಭವನದಲ್ಲಿರುವ ಜಾರಿ ನಿರ್ದೇಶನಾಲಯದ (ಇಡಿ) ಪ್ರಧಾನ ಕಚೇರಿಯಲ್ಲಿನ ಐವರಿಗೆ ಕೋವಿಡ್-19 ಇರುವುದು ದೃಢಪಟ್ಟಿದೆ.

ಇಡಿ ಕಟ್ಟಡವನ್ನು ನಿನ್ನೆ ಸ್ವಚ್ಛಗೊಳಿಸಲಾಗಿದ್ದು, ನಾಳೆವರೆಗೆ ಕಚೇರಿಯನ್ನು ಸೀಲ್ ಮಾಡಲಾಗಿದೆ. ಇಡಿ ಅಧಿಕಾರಿಗಳ ಕೆಲವು ಕುಟುಂಬ ಸದಸ್ಯರು ಕೂಡ ಸೋಂಕಿಗೆ ಒಳಗಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಮಾಹಿತಿ ಪ್ರಕಾರ ಶನಿವಾರ ದೆಹಲಿಯಲ್ಲಿ 15,311 ಸಕ್ರಿಯ ಪ್ರಕರಣಗಳಿದ್ದು, ಒಟ್ಟಾರೆ 26,334 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಪೈಕಿ 708 ಜನರು ಮೃತಪಟ್ಟಿದ್ದರೆ, 10,315 ಮಂದಿ ಗುಣಮುಖರಾಗಿದ್ದಾರೆ.

ADVERTISEMENT

ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 9,887 ಹೊಸ ಪ್ರಕರಣಗಳು ವರದಿಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 2,36,657ಕ್ಕೆ ಏರಿಕೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.