ADVERTISEMENT

ಉತ್ತರ ಪ್ರದೇಶ | ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ: ಐವರ ಬಂಧನ

ಪಿಟಿಐ
Published 7 ಫೆಬ್ರುವರಿ 2025, 15:51 IST
Last Updated 7 ಫೆಬ್ರುವರಿ 2025, 15:51 IST
ಬಿಹಾರದ ಸರ್ಕಾರಿ ಶಾಲೆಯಲ್ಲಿ  ಶಿಕ್ಷಕರಿಂದಲೇ ಸಾಮೂಹಿಕ ಅತ್ಯಾಚಾರ
ಬಿಹಾರದ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರಿಂದಲೇ ಸಾಮೂಹಿಕ ಅತ್ಯಾಚಾರ   

ಬಲ್ಲಿಯಾ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯಲ್ಲಿ 13 ವರ್ಷದ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅಪ್ರಾಪ್ತರು ಸೇರಿದಂತೆ ಐದು ಜನರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಫೆಬ್ರುವರಿ 1ರ ರಾತ್ರಿ ಬಾಲಕಿ ತನ್ನ ಸಹೋದರಿಯರೊಂದಿಗೆ ಮನೆಯಲ್ಲಿ ಮಲಗಿದ್ದ ವೇಳೆ ಅದೇ ಗ್ರಾಮದ ಐದು ಜನರು ಆಕೆಯ ಬಾಯಿಯನ್ನು ಕಟ್ಟಿ ಹೊಲಕ್ಕೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಸಂತ್ರಸ್ತೆಯ ತಾಯಿ ನೀಡಿರುವ ದೂರಿನಲ್ಲಿ ಉಲ್ಲೇಖಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಕೃತ್ಯದ ಕುರಿತು ಯಾರಿಗಾದರೂ ಹೇಳಿದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಆರೋಪಿಗಳು ಬಾಲಕಿಗೆ ಬೆದರಿಕೆ ಹಾಕಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ದೂರಿನ ಆಧಾರದ ಮೇಲೆ ಐದು ಜನರ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ಮತ್ತು ಪೋಕ್ಸೊ ಕಾಯ್ದೆಯ ಸಂಬಂಧಿತ ವಿಭಾಗಗಳ ಅಡಿಯಲ್ಲಿ ದೂರು ದಾಖಲಿಸಲಾಗಿದೆ ಎಂದು ರಾಸ್ರಾ ಪೊಲೀಸ್ ಠಾಣೆಯ ಎಸ್‌ಎಚ್‌ಒ ರತ್ನೇಶ್ ಸಿಂಗ್ ತಿಳಿಸಿದ್ದಾರೆ.

ಆರೋಪಿಗಳನ್ನು ಇಂದು (ಶುಕ್ರವಾರ) ಬಂಧಿಸಲಾಗಿದೆ. ಆರೋಪಿಗಳಲ್ಲಿ ಮೂವರು ಅಪ್ರಾಪ್ತರು, ಉಳಿದ ಇಬ್ಬರು 22 ರಿಂದ 25 ವರ್ಷ ವಯಸ್ಸಿನವರಾಗಿದ್ದಾರೆ ಎಂದು ಸಿಂಗ್‌ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.