ನವದೆಹಲಿ: ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರ ಎರಡು ದಿನಗಳ ಉತ್ತರಾಖಂಡ ಭೇಟಿಯನ್ನು ವರದಿ ಮಾಡಲು ಹರಿದ್ವಾರಕ್ಕೆ ಮಾಧ್ಯಮ ಪ್ರತಿನಿಧಿಗಳನ್ನು ಕರೆದೊಯ್ಯುತ್ತಿದ್ದ ಕನಿಷ್ಠ ಐದು ವಾಹನಗಳು ಭಾನುವಾರ ಬೆಳಿಗ್ಗೆ ಅಪಘಾತಕ್ಕೀಡಾಗಿವೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಹರಿದ್ವಾರಕ್ಕೆ ಕೆಲವೇ ಕಿಲೋ ಮೀಟರ್ ದೂರದಲ್ಲಿ ಬೆಳಿಗ್ಗೆ ಸುಮಾರು 10 ಗಂಟೆ ವೇಳೆ ಅಪಘಾತ ಸಂಭವಿಸಿದ್ದು, ಪ್ರಾಣಾಪಾಯದಿಂದ ಎಲ್ಲರೂ ಪಾರಾಗಿದ್ದಾರೆ.
ತಮ್ಮ ನೇತೃತ್ವದಲ್ಲಿ ಸರ್ಕಾರ 100 ದಿನಗಳನ್ನು ಯಶಸ್ವಿಯಾಗಿ ಪೂರೈಸಿದ್ದಕ್ಕಾಗಿ ರೇಖಾ ಗುಪ್ತಾ ಅವರು ತಮ್ಮ ಕುಟುಂಬ ಸದಸ್ಯರೊಂದಿಗೆ ಉತ್ತರಾಖಂಡಕ್ಕೆ ಭೇಟಿ ನೀಡಿದ್ದು, ಇಂದು ಹರಿದ್ವಾರಕ್ಕೆ ಭೇಟಿ ನೀಡಿದ್ದಾರೆ.
ಗುಪ್ತಾ ಅವರ ಬೆಂಗಾವಲು ಪಡೆಯಲಿದ್ದ ಕಾರೊಂದು ಏಕಾಏಕಿ ಬ್ರೇಕ್ ಹಾಕಿದ್ದರಿಂದ ಅವರ ವಾಹನಗಳನ್ನು ಹಿಂಬಾಲಿಸುತ್ತಿದ್ದ ಮಾಧ್ಯಮ ಪ್ರತಿನಿಧಿಗಳಿದ್ದ ಐದು ವಾಹನಗಳು ಒಂದಕ್ಕೊಂದು ಡಿಕ್ಕಿ ಹೊಡೆದುಕೊಂಡವು ಎಂದು ಮಾಧ್ಯಮಗಳು ವರದಿ ಮಾಡಿವೆ.
ಆದರೆ, ಮುಖ್ಯಮಂತ್ರಿ ಕಚೇರಿ ಈ ವರದಿಯನ್ನು ನಿರಾಕರಿಸಿದ್ದು, ತಪ್ಪು ಮಾಡಿದ ಚಾಲಕ ಮುಖ್ಯಮಂತ್ರಿಗಳ ಬೆಂಗಾವಲು ಪಡೆಯ ಭಾಗವಾಗಿರಲಿಲ್ಲ ಎಂದು ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.