ADVERTISEMENT

ಅಪರಿಚಿತರಿಂದ ಗುಂಡಿನ ದಾಳಿಗೆ ಐವರು ಪಾಕ್ ಪೊಲೀಸರ ಸಾವು

ಪಿಟಿಐ
Published 23 ಡಿಸೆಂಬರ್ 2025, 14:31 IST
Last Updated 23 ಡಿಸೆಂಬರ್ 2025, 14:31 IST
<div class="paragraphs"><p>ಸಾವು</p></div>

ಸಾವು

   

(ಪ್ರಾತಿನಿಧಿಕ ಚಿತ್ರ)

ಪೇಶಾವರ: ವಾಯವ್ಯ ಪಾಕಿಸ್ತಾನದ ಖೈಬರ್‌ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಪೊಲೀಸರ ವಾಹನದ ಮೇಲೆ ಅಪರಿಚಿತ ಶಸ್ತ್ರಸಜ್ಜಿತ ದಾಳಿಕೋರರು ಗುಂಡಿನ ದಾಳಿ ನಡೆಸಿದ್ದು, ಐವರು ಪೊಲೀಸರು ಮೃತಪಟ್ಟಿದ್ದಾರೆ.

ADVERTISEMENT

‘ಕರಾಕ್‌ ಜಿಲ್ಲೆಯಲ್ಲಿ ಗಸ್ತು ತಿರುಗುತ್ತಿದ್ದ ಪೊಲೀಸರ ಮೇಲೆ ದಾಳಿ ನಡೆದಿದೆ. ವ್ಯಾನ್‌ನಲ್ಲಿದ್ದ ಐದು ಮಂದಿ ಪೊಲೀಸರು ಮೃತಪಟ್ಟಿದ್ದಾರೆ’ ಎಂದು ಜಿಲ್ಲಾ ಪೊಲೀಸ್‌ ಅಧಿಕಾರಿ(ಡಿಪಿಒ) ಸೌದ್‌ ಖಾನ್‌ ತಿಳಿಸಿದ್ದಾರೆ.

ನಿಷೇಧಿತ ತೆಹ್ರೀಕ್‌–ಇ–ತಾಲಿಬಾನ್‌ ಪಾಕಿಸ್ತಾನ್‌ (ಟಿಟಿಪಿ) ಸಂಘಟನೆಯೇ ದಾಳಿಯ ಹಿಂದಿದೆ ಎಂದು ಸರ್ಕಾರ ಇದೇ ವೇಳೆ ಆರೋಪಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.