ಬೆಂಕಿಯಿಂದಾಗಿ ಹೊತ್ತಿ ಉರಿಯತ್ತಿರುವ ಕಾರುಗಳು
– ಪಿಟಿಐ ಚಿತ್ರ
ನವದೆಹಲಿ: ಉತ್ತರ ದೆಹಲಿಯ ಚಾಂದಿನಿ ಚೌಕ್ ಪ್ರದೇಶದಲ್ಲಿ ಬುಧವಾರ ಬೆಳಿಗ್ಗೆ ಬೆಂಕಿ ಹೊತ್ತಿಕೊಂಡು ಐದು ಅಂಗಡಿಗಳಿಗೆ ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆಯಲ್ಲಿ ಯಾವುದೇ ಸಾವು, ನೋವಿನ ಬಗ್ಗೆ ವರದಿಯಾಗಿಲ್ಲ.
ಫತೇಪುರಿ ಮಸೀದಿ ಸಮೀಪ ಇದ್ದ ಐದು ಅಂಗಡಿಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ಬಗ್ಗೆ ಮುಂಜಾನೆ 3.12ರ ವೇಳೆಗೆ ನಿಯಂತ್ರಣ ಕೊಠಡಿಗೆ ಕರೆ ಬಂದಿದೆ. ಬೆಳಿಗ್ಗೆ 5 ಗಂಟೆ ಹೊತ್ತಿಗೆ ಬೆಂಕಿಯನ್ನು ನಂದಿಸಲಾಗಿದೆ ಎಂದು ದೆಹಲಿ ಅಗ್ನಿಶಾಮಕ ಸೇವೆಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಇನ್ನೊಂದು ಘಟನೆಯಲ್ಲಿ ದೆಹಲಿಯ ಮಧು ವಿಹಾರದ ಪ್ರದೇಶದ ನಾಗರಿಕ ಪ್ರಾಧಿಕಾರದ ಪಾರ್ಕಿಂಗ್ ಸ್ಥಳದಲ್ಲಿ ಬೆಂಕಿ ಅವಘಡ ಸಂಭವಿಸಿ 17 ಕಾರುಗಳು ಸುಟ್ಟು ಹೋಗಿವೆ.
ತಡರಾತ್ರಿ 1.17ರ ವೇಳೆಗೆ ಘಟನೆ ಬಗ್ಗೆ ಮಾಹಿತಿ ಲಭಿಸಿದ್ದು, 9 ಅಗ್ನಿಶಾಮಕ ವಾಹನಗಳು ಸತತ ನಾಲ್ಕು ಗಂಟೆ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದೆ. ಈ ಘಟನೆಯಲ್ಲೂ ಯಾವುದೇ ಸಾವು ನೋವು ಉಂಟಾಗಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.