ADVERTISEMENT

ಜಮ್ಮು–ಕಾಶ್ಮೀರ | ಭದ್ರತಾ ಪಡೆಗಳ ಕಾರ್ಯಾಚರಣೆ: ಐವರು ಉಗ್ರರ ಹತ್ಯೆ

ಪಿಟಿಐ
Published 10 ಜೂನ್ 2020, 20:40 IST
Last Updated 10 ಜೂನ್ 2020, 20:40 IST
   

ಶ್ರೀನಗರ: ಜಮ್ಮು–ಕಾಶ್ಮೀರದ ಶೋಪಿಯಾನ್‌ ಜಿಲ್ಲೆಯ ಸುಗೂ ಪ್ರದೇಶದಲ್ಲಿ ಬುಧವಾರ ನಡೆದ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ಐವರು ಉಗ್ರರನ್ನು ಹೊಡೆದುರುಳಿಸಿವೆ.

ಶೋಪಿಯಾನ್‌ ಜಿಲ್ಲೆಯಲ್ಲಿ ಕಳೆದ ನಾಲ್ಕು ದಿನಗಳಲ್ಲಿ ನಡೆದ ಮೂರನೇ ಕಾರ್ಯಾಚರಣೆ ಇದಾಗಿದ್ದು, ಒಟ್ಟು 14 ಉಗ್ರರನ್ನು ಭದ್ರತಾ ಪಡೆಗಳು ಹತ್ಯೆ ಮಾಡಿವೆ. ಹತ್ಯೆಯಾದವರಲ್ಲಿ ಹಿಜ್ಬುಲ್‌ ಮುಜಾಹಿದೀನ್‌ ಸಂಘಟನೆಗೆ ಸೇರಿದ 9 ಜನ ಉಗ್ರರೂ ಸೇರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT