ADVERTISEMENT

ಜಮ್ಮು ಮತ್ತು ಕಾಶ್ಮೀರ: ಐವರು ವಿದೇಶಿ ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆ

ಪಿಟಿಐ
Published 16 ಜೂನ್ 2023, 4:56 IST
Last Updated 16 ಜೂನ್ 2023, 4:56 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿರುವ ಗಡಿ ನಿಯಂತ್ರಣ ರೇಖೆ ಬಳಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಐವರು ವಿದೇಶಿ ಉಗ್ರರು ಹತ್ಯೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾಶ್ಮೀರದ ಉತ್ತರಕ್ಕಿರುವ ಕುಪ್ವಾರ ಜಿಲ್ಲೆಯ ಜುಮಾಗುಂದ್‌ ಪ್ರದೇಶದಲ್ಲಿ ಉಗ್ರರು ಅಡಗಿರುವ ಖಚಿತ ಮಾಹಿತಿ ಮೇರೆಗೆ ಮುಂಜಾನೆಯೇ ಕಾರ್ಯಾಚರಣೆ ಆರಂಭಿಸಲಾಗಿತ್ತು. ಈ ವೇಳೆ ಉಗ್ರರು ಮತ್ತು ಭದ್ರತಾ ಪಡೆ ನಡುವೆ ಗುಂಡಿನ ಕಾಳಗ ನಡೆದಿದೆ.

ಕಾಶ್ಮೀರದ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ (ಎಡಿಜಿಪಿ) ವಿಜಯ್‌ ಕುಮಾರ್‌ ಅವರು ಈ ಬಗ್ಗೆ ಟ್ವಿಟರ್‌ನಲ್ಲಿ ಮಾಹಿತಿ ನೀಡಿದ್ದಾರೆ. 'ಐವರು ವಿದೇಶಿ ಉಗ್ರರು ಎನ್‌ಕೌಂಟರ್‌ನಲ್ಲಿ ಹತರಾಗಿದ್ದಾರೆ. ಶೋಧ ಮುಂದುವರಿದಿದೆ' ಎಂದು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.