ಅತ್ಯಾಚಾರ (ಸಾಂದರ್ಭಿಕ ಚಿತ್ರ)
ಮಹಾರಾಜಗಂಜ್: ನೆರೆ ಮನೆಯ 5 ವರ್ಷದ ಬಾಲಕಿಯ ಮೇಲೆ 13 ವರ್ಷದ ಅಪ್ರಾಪ್ತ ವಯಸ್ಕನೊಬ್ಬ ಅತ್ಯಾಚಾರ ಎಸಗಿದ ಘಟನೆ ಉತ್ತರ ಪ್ರದೇಶದ ಮಹಾರಾಜಗಂಜ್‌ನಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬ್ರಿಜ್‌ಮನ್‌ಗಂಜ್ ಪೊಲೀಸ್ ಠಾಣೆಯ ವ್ಯಾಪ್ತಿಗೊಳಪಡುವ ಗ್ರಾಮದಲ್ಲಿ ಗುರುವಾರ ಸಂಜೆ ಈ ಘಟನೆ ನಡೆದಿದೆ.
ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಮಹಾರಾಜಗಂಜ್‌ನ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅತಿಶ್ ಕುಮಾರ್ ಸಿಂಗ್ ಹೇಳಿದ್ದಾರೆ.
ಮನೆಯ ಹೊರಗೆ ಆಟವಾಡುತ್ತಿದ್ದ ಬಾಲಕಿಯನ್ನು ತನ್ನ ಸ್ಥಳಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ ಎಂದು ಸಿಂಗ್ ಮಾಹಿತಿ ನೀಡಿದ್ದಾರೆ.
ನಡೆದ ಘಟನೆಯ ಬಗ್ಗೆ ಬಾಲಕಿ ಹೇಳಿಕೊಂಡಿದ್ದು, ಕುಟುಂಬಸ್ಥರು ದೂರು ದಾಖಲಿಸಿದ್ದಾರೆ. ಬಾಲಕಿಯ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ ಎಂದು ಅವರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.