ADVERTISEMENT

5 ವರ್ಷದ ಬಾಲಕಿ ಮೇಲೆ ನೆರೆಮನೆಯ ವ್ಯಕ್ತಿಯಿಂದ ಅತ್ಯಾಚಾರ

ಪಿಟಿಐ
Published 29 ಮಾರ್ಚ್ 2022, 14:26 IST
Last Updated 29 ಮಾರ್ಚ್ 2022, 14:26 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಕಪುರ್ತಲಾ: 5 ವರ್ಷದ ಬಾಲಕಿ ಮೇಲೆ ನೆರೆಮನೆಯ ವ್ಯಕ್ತಿ ಆಕೆಯ ಮನೆಯಲ್ಲಿಯೇ ಅತ್ಯಾಚಾರ ಎಸಗಿರುವ ಘಟನೆ ಪಂಜಾಬ್‌ನ ಕಪುರ್ತಲಾ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಆರೋಪಿಯನ್ನು ಮೊಹಮ್ಮದ್ ಸೌರವ್ ಎಂದು ಗುರುತಿಸಲಾಗಿದ್ದು, ಬಿಹಾರದಿಂದ ಬಂದಿದ್ದ ವಲಸೆ ಕಾರ್ಮಿಕನಾಗಿದ್ದಾನೆ. ಸದ್ಯ ಆತನನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಹರೀಶ್ ದಾಮಿಯಾ ತಿಳಿಸಿದ್ದಾರೆ.

ಸೋಮವಾರ ಬಾಲಕಿಯೊಬ್ಬಳೇ ಮನೆಯಲ್ಲಿ ಇದ್ದಾಗ ಸಿಹಿ ತಿಂಡಿಯ ಆಮಿಷ ತೋರಿದ ಆರೋಪಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ.

ADVERTISEMENT

ವಲಸೆ ಕಾರ್ಮಿಕರೇ ಆಗಿರುವ ಬಾಲಕಿಯ ಪೋಷಕರು ಮನೆಗೆ ಮರಳಿದಾಗ ನಡೆದ ಘಟನೆಯನ್ನು ವಿವರಿಸಿದ್ದಾಳೆ. ಆಕೆಯ ತಾಯಿ ಈ ಬಗ್ಗೆ ಫತ್ತು ಧಿಂಗಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.