ADVERTISEMENT

ಬಾಲಕಿ ಮೇಲೆ ಅತ್ಯಾಚಾರ: ಬಂಧನ

ಪಿಟಿಐ
Published 7 ಅಕ್ಟೋಬರ್ 2020, 12:13 IST
Last Updated 7 ಅಕ್ಟೋಬರ್ 2020, 12:13 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬುಢಾಂವ್(ಉತ್ತರ ಪ್ರದೇಶ): ಇಲ್ಲಿನ ಹಜರತ್‌ಪುರ ಬಳಿ ಬುಧವಾರ ಮನೆಯಂಗಳದಲ್ಲಿ ಆಟವಾಡುತ್ತಿದ್ದ ಐದು ವರ್ಷದ ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದ ಆಕೆಯ ಚಿಕ್ಕಪ್ಪ ಅತ್ಯಾಚಾರ ಎಸಗಿದ್ದಾನೆ.

ಆನಂತರ ಆರೋಪಿಯು ಬಾಲಕಿಯನ್ನು ಸ್ಥಳದಲ್ಲಿಯೇ ಬಿಟ್ಟು ಪರಾರಿಯಾಗಿದ್ದನು. ಸಂತ್ರಸ್ತೆಯ ಕುಟುಂಬದ ಸದಸ್ಯರು ಪ್ರಕರಣ ದಾಖಲಿಸಿದ ನಂತರ ಆತನನ್ನು ಪತ್ತೆ ಹಚ್ಚಿ ಬಂಧಿಸಲಾಗಿದೆ. ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT