ರಜೌರಿ: ಜಮ್ಮು ಮತ್ತು ಕಾಶ್ಮೀರದ ರಜೌರಿಯ ಧಂಗ್ರಿ ಜಿಲ್ಲೆಯಲ್ಲಿ ನಡೆದ ಉಗ್ರರ ದಾಳಿಗೆ ಸಂಬಂಧಿಸಿದಂತೆ ಜಮ್ಮು ಮತ್ತು ಕಾಶ್ಮೀರ ಪೊಲೀಸರು 50 ಮಂದಿಯನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದಾರೆ.
ಜಿಲ್ಲೆಯ ವಿವಿಧ ಭಾಗಗಳ ಜನರನ್ನು ವಶಕ್ಕೆ ಪಡೆದು ಭಯೋತ್ಪಾದಕ ಕೃತ್ಯದ ಕುರಿತು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
‘ಪೊಲೀಸ್ ಮತ್ತು ಇತರ ರಕ್ಷಣಾ ಪಡೆಯಿಂದ ಈ ವಿಚಾರಣೆ ನಡೆಯುತ್ತಿದೆ. ಕೆಲವರು ವಿಚಾರಣೆ ವೇಳೆ ಮಹತ್ವದ ಸುಳಿವು ನೀಡಿದ್ದು, ಮುಂದಿನ ತನಿಖೆಗೆ ಇದು ಸಹಕಾರಿಯಾಗಲಿದೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಜ.1ರಂದು ರಜೌರಿಯ ಹಳ್ಳಿಯೊಂದರಲ್ಲಿ ಭಯೋತ್ಪಾದಕ ದಾಳಿ ನಡೆದಿತ್ತು. ಈ ವೇಳೆ ಸ್ಥಳದಲ್ಲೇ 3 ಮಂದಿ ಮೃತಪಟ್ಟಿದ್ದರು. ಆಸ್ಪತ್ರೆಯಲ್ಲಿ ನಾಲ್ವರು ಸಾವಿಗೀಡಾಗಿದ್ದರು. ಈವರೆಗೆ ಮೃತಪಟ್ಟವರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.