ADVERTISEMENT

ಮಹಾರಾಷ್ಟ್ರ: 24 ಗಂಟೆ ಅವಧಿಯಲ್ಲಿ 511 ಪೊಲೀಸ್‌ ಸಿಬ್ಬಂದಿಗೆ ಕೋವಿಡ್‌-19

ಏಜೆನ್ಸೀಸ್
Published 6 ಸೆಪ್ಟೆಂಬರ್ 2020, 7:17 IST
Last Updated 6 ಸೆಪ್ಟೆಂಬರ್ 2020, 7:17 IST
ಕಾರ್ಯನಿರತ ಪೊಲೀಸ್‌ ಸಿಬ್ಬಂದಿ
ಕಾರ್ಯನಿರತ ಪೊಲೀಸ್‌ ಸಿಬ್ಬಂದಿ   

ಮುಂಬೈ: ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 511 ಪೊಲೀಸ್ ಸಿಬ್ಬಂದಿಗೆ ಕೊರೊನಾ ವೈರಸ್‌ ಸೋಂಕು ದೃಢಪಟ್ಟಿದ್ದು, 7 ಮಂದಿ ಮೃತಪಟ್ಟಿದ್ದಾರೆ.

ಕೊರೊನಾ ಸೋಂಕು ಪ್ರಕರಣಗಳು ಹೆಚ್ಚುತ್ತಲೇ ಇದ್ದು ಪೊಲೀಸ್‌ ಸಿಬ್ಬಂದಿಯನ್ನು ಆತಂಕಕ್ಕೀಡು ಮಾಡಿದೆ.

ಪೊಲೀಸ್‌ ಇಲಾಖೆಯಲ್ಲಿ ಈವರೆಗೆ 16,912 ಪ್ರಕರಣಗಳು ವರದಿಯಾಗಿವೆ. 13,719 ಮಂದಿ ಗುಣಮುಖರಾಗಿದ್ದಾರೆ. ಸದ್ಯ 3,020 ಸಕ್ರಿಯ ಪ್ರಕರಣಗಳಿದ್ದು, ಇದುವರೆಗೆ 173 ಮಂದಿ ಸಾವಿಗೀಡಾಗಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.