ಮುಂಬೈ: ಕೋವಿಡ್ -19 ರೋಗ ಬಾಧಿತ 52ರ ಹರೆಯದ ವ್ಯಕ್ತಿಯೊಬ್ಬರು ಸೋಮವಾರ ಪುಣೆಯಲ್ಲಿ ಸಾವಿಗೀಡಾಗಿದ್ದಾರೆ. ಕೋವಿಡ್‌ನಿಂದಾಗಿ ಮಹಾರಾಷ್ಟ್ರದಲ್ಲಿ ಸಾವಿಗೀಡಾದವರ ಸಂಖ್ಯೆ 9ಕ್ಕೆ ಏರಿದೆ.
ಮೃತ ವ್ಯಕ್ತಿ ಸಕ್ಕರೆ ಕಾಯಿಲೆ ಮತ್ತು ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದರು ಎಂದು ಆಸ್ಪತ್ರೆಯ ಅಧಿಕಾರಿಗಳು ಹೇಳಿದ್ದಾರೆ.
ಮಾರ್ಚ್ 22 ರಂದು ಈ ವ್ಯಕ್ತಿಗೆ ಕೋವಿಡ್ ರೋಗ ಇರುವುದು ದೃಢಪಟ್ಟಿದ್ದು, ಸೋಮವಾರ ಪುಣೆಯ ಆಸ್ಪತ್ರೆಯಲ್ಲಿಸಾವಿಗೀಡಾಗಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಪುಣೆಯಲ್ಲಿರುವ ದೀನಾನಾಥ್ ಮಂಗೇಷ್ಕರ್ ಆಸ್ಪತ್ರೆಯಲ್ಲಿ ವೆಂಟಿಲೇಟರ್ ಸಪೋರ್ಟ್ ನೀಡಲಾಗಿದ್ದರೂಬಹು ಅಂಗಾಂಗ ವೈಫಲ್ಯದಿಂದ ಅವರು ಸಾವಿಗೀಡಾಗಿದ್ದಾರೆ ಎಂದು ಪುಣೆ ಮೇಯರ್ ಮುರಳೀಧರ್ ಮೊಹೊಲ್ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.