ನವದೆಹಲಿ: ದೇಶದಲ್ಲಿ ಒಟ್ಟಾರೆ 5.28 ಲಕ್ಷ ಪೊಲೀಸ್ ಹುದ್ದೆಗಳು ಖಾಲಿ ಇವೆ. ನಾಗಾಲ್ಯಾಂಡ್ ಬಿಟ್ಟರೆ ಉಳಿದೆಲ್ಲಾ ರಾಜ್ಯಗಳಲ್ಲಿ ಸಾವಿರಾರು ಪೊಲೀಸ್ ಹುದ್ದೆಗಳು ಖಾಲಿ ಇವೆ ಎಂದು ಕೇಂದ್ರ ಗೃಹ ಸಚಿವಾಲಯ ಹೇಳಿದೆ.
‘ಪ್ರತಿವರ್ಷವೂ ಹಲವರು ಸೇವೆಯಿಂದ ನಿವೃತ್ತರಾಗುತ್ತಾರೆ. ಸೇವೆಯ ಅವಧಿಯಲ್ಲೇ ಕೆಲವರು ಸಾಯುತ್ತಾರೆ. ಅದಕ್ಕೆ ಅನುಗುಣವಾಗಿ ನೇಮಕಾತಿ ಆಗುತ್ತಿಲ್ಲ. ನೇಮಕಾತಿ ಪ್ರಕ್ರಿಯೆ ವಿಳಂಬ ಆಗುತ್ತಿರುವುದೇ ಸಿಬ್ಬಂದಿ ಕೊರತೆಗೆ ಕಾರಣ’ ಎಂದು ಅಧಿಕಾರಿಗಳು ಹೇಳುತ್ತಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.