ಹೈದರಾಬಾದ್: ತೆಲಂಗಾಣದ ಮುಲುಗುವಿನಲ್ಲಿ ಇಂದು (ಬುಧವಾರ) ಮುಂಜಾನೆ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 5.3 ತೀವ್ರತೆ ದಾಖಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇಂದು ಬೆಳಿಗ್ಗೆ 7:27ಕ್ಕೆ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪ ವಿಜ್ಞಾನ ಕೇಂದ್ರವು ತಿಳಿಸಿದೆ.
ಭೂಕಂಪನದ ಕೇಂದ್ರಬಿಂದು ಮುಲುಗುವಿನ ಅಕ್ಷಾಂಶ 18.44 ಡಿಗ್ರಿ ಉತ್ತರ, ರೇಖಾಂಶ 80.24 ಡಿಗ್ರಿ, 40 ಕಿ.ಮೀ ಆಳದಲ್ಲಿತ್ತು. ಯಾವುದೇ ಪ್ರಾಣಹಾನಿ, ಆಸ್ತಿ ಪಾಸ್ತಿ ನಷ್ಟ ಉಂಟಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನವೆಂಬರ್ 28ರಂದು ಜಮ್ಮು ಮತ್ತು ಕಾಶ್ಮೀರದಲ್ಲಿ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 5.8 ತೀವ್ರತೆ ದಾಖಲಾಗಿತ್ತು. ಯಾವುದೇ ಪ್ರಾಣಹಾನಿ, ಆಸ್ತಿ ಪಾಸ್ತಿ ನಷ್ಟ ಉಂಟಾಗಿರಲಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.