ADVERTISEMENT

ಯುಜಿಸಿ ಅಧ್ಯಕ್ಷರ ಅಧಿಕಾರ ಸ್ವೀಕಾರ

ಪಿಟಿಐ
Published 1 ಜನವರಿ 2018, 19:30 IST
Last Updated 1 ಜನವರಿ 2018, 19:30 IST

ನವದೆಹಲಿ: ವಿಶ್ವವಿದ್ಯಾಲಯ ಧನ ಸಹಾಯ ಆಯೋಗದ (ಯುಜಿಸಿ) ಅಧ್ಯಕ್ಷರಾಗಿ ಧೀರೇಂದ್ರ ಪಾಲ್‌ ಸಿಂಗ್‌ ಅವರು ಸೋಮವಾರ ಅಧಿಕಾರ ಸ್ವೀಕರಿಸಿದರು.

ಅಧಿಕಾರ ವಹಿಸಿಕೊಂಡ ನಂತರ ಅವರು ಯುಜಿಸಿಯ ಹಿರಿಯ ಅಧಿಕಾರಿಗಳು ಮತ್ತು ಸಿಬ್ಬಂದಿಯೊಂದಿಗೆ ಸಭೆ ನಡೆಸಿದರು.

ಯುಜಿಸಿಯಲ್ಲಿ ಪಾರದರ್ಶಕ, ಪರಿಣಾಮಕಾರಿ ಮತ್ತು ದಕ್ಷತೆಯ ಶ್ರಮ ಸಂಸ್ಕೃತಿಗೆ ಅವರು ಕರೆ ನೀಡಿದರು.

ADVERTISEMENT

ಸ್ವಯಂ ನಿಯಂತ್ರಣ, ಶಿಸ್ತು ಮತ್ತು ಮೌಲ್ಯ ಆಧರಿತ ಉದ್ದೇಶಕ್ಕೆ ಹೆಚ್ಚು ಒತ್ತು ನೀಡುವಂತೆಯೂ ಸಲಹೆ ನೀಡಿದರು ಎಂದು ಯುಜಿಸಿ ಹೇಳಿಕೆಯಲ್ಲಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.