ರಾಂಚಿ: ಬಹುಕೋಟಿ ಮೇವು ಹಗರಣಕ್ಕೆ ಸಂಬಂಧಿಸಿದ ಮತ್ತೊಂದು ಪ್ರಕರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಶಿಕ್ಷೆಯ ಪ್ರಮಾಣ ಘೋಷಣೆಯನ್ನು ಸಿಬಿಐ ವಿಶೇಷ ನ್ಯಾಯಾಲಯ ಮುಂದೂಡಿದೆ.
ಅಡ್ವೊಕೇಟ್ ವಿಂದೇಶ್ವರಿ ಪ್ರಸಾದ್ ಅವರ ನಿಧನ ಕಾರಣದಿಂದ ಕೋರ್ಟ್ ಬುಧವಾರ ಶಿಕ್ಷೆ ಪ್ರಮಾಣ ಪ್ರಕಟಿಸಿಲ್ಲ. ಲಾಲು ಪ್ರಸಾದ್ ಸೇರಿ 16 ಜನರನ್ನು ಅಪರಾಧಿಗಳಿಗೆ ಗುರುವಾರ ಶಿಕ್ಷೆ ಪ್ರಮಾಣ ಪ್ರಕಟವಾಗಲಿದೆ.
ಲಾಲು ಪುತ್ರ ತೇಜಸ್ವಿ ಯಾದವ್, ಆರ್‌ಜೆಡಿಯು ಪಕ್ಷದ ಉಪಾಧ್ಯಕ್ಷ ರಘುವಂಶ ಪ್ರಸಾದ್ ಹಾಗೂ ಮನೋಜ್ ಝಾ ವಿರುದ್ಧ ಸಿಬಿಐ ವಿಶೇಷ ನ್ಯಾಯಾಲಯ ನ್ಯಾಯಾಂಗ ನಿಂದನೆ ಆರೋಪದಡಿ ನೋಟಿಸ್ ಜಾರಿ ಮಾಡಿದ್ದು, ಜ.23ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.