ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸಿ ಬಿಜೆಪಿ ತ್ಯಜಿಸಿದ್ದ ಮಾಜಿ ಸಂಸದ ನಾನಾ ಪಟೋಲೆ ಕಾಂಗ್ರೆಸ್‌ಗೆ ಮತ್ತೆ ಸೇರಿದ್ದಾರೆ.
ಕಳೆದ ಲೋಕಸಭಾ ಚುನಾವಣೆಯಲ್ಲಿ ಭಂಡಾರಾ ಗೋಂದಿಯಾ ಲೋಕಸಭಾ ಕ್ಷೇತ್ರದಲ್ಲಿ ಎನ್‌ಸಿಪಿ ಮುಖಂಡ ಪ್ರಫುಲ್ ಪಟೇಲ್ ಅವರನ್ನು ಸೋಲಿಸಿದ್ದ ಪಟೋಲೆ ಬುಧವಾರ ಸಂಜೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಅಧಿಕೃತವಾಗಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಕೆಲವು ವರ್ಷಗಳ ಹಿಂದೆ ಅವರು ಕಾಂಗ್ರೆಸ್ ತ್ಯಜಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.