ADVERTISEMENT

ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ ಕೇಂದ್ರ, ರಾಜ್ಯಗಳಿಗೆ ನೋಟಿಸ್‌

​ಪ್ರಜಾವಾಣಿ ವಾರ್ತೆ
Published 4 ಜನವರಿ 2018, 19:30 IST
Last Updated 4 ಜನವರಿ 2018, 19:30 IST

ನವದೆಹಲಿ: ಮಹಿಳೆಯರು ಕಾರ್ಯ ನಿರ್ವಹಿಸುವ ಸ್ಥಳದಲ್ಲಿ ಲೈಂಗಿಕ ದೌರ್ಜನ್ಯ ತಡೆಯಲು ರೂಪಿಸಿದ 2013ರ ಕಾಯ್ದೆಯನ್ನು ಜಾರಿಗೊಳಿಸಿರುವ ಕುರಿತು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್‌ ಗುರುವಾರ ನೊಟೀಸ್‌ ಜಾರಿಗೊಳಿಸಿದೆ.

2013ರ ‘ವೃತ್ತಿ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ (ತಡೆ, ನಿಷೇಧ ಮತ್ತು ಪರಿಹಾರ) ಕಾಯ್ದೆ’ಯ ಅನುಷ್ಠಾನ ಕುರಿತು ‘ಇನಿಷಿಯೇಟಿವ್ಸ್‌ ಫಾರ್‌ ಇನ್‌ಕ್ಲೂಷನ್‌ ಫೌಂಡೇಷನ್‌’ ಸರ್ಕಾರೇತರ ಸಂಸ್ಥೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು. ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ದೀಪಕ್‌ ಮಿಶ್ರಾ ನೇತೃತ್ವದ ಮೂವರು ನ್ಯಾಯಮೂರ್ತಿಗಳ ಪೀಠ ನೊಟೀಸ್‌ ಜಾರಿಗೊಳಿಸಿದ್ದು ನಾಲ್ಕು ವಾರಗಳಲ್ಲಿ ಉತ್ತರಿಸುವಂತೆ ಸೂಚಿಸಿದೆ.

ಕಾಯ್ದೆ ಜಾರಿಗೊಳಿಸಲು ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ನಿರಾಸಕ್ತಿ ತೋರುತ್ತಿವೆ. ಇದು ಮಹಿಳೆಯ ಗೌರವ ಮತ್ತು ಆಕೆಯ ಮೂಲಭೂತ ಹಕ್ಕುಗಳ ಉಲ್ಲಂಘನೆ ಎಂದು ನ್ಯಾಯಪೀಠ ಹೇಳಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.