ADVERTISEMENT

ಲೋಕಸಭಾ ಸ್ಪೀಕರ್‌ಗೆ ರಾಹುಲ್‌ ವಿರುದ್ಧದ ಹಕ್ಕುಚ್ಯುತಿ ನೋಟಿಸ್‌

ಏಜೆನ್ಸೀಸ್
Published 6 ಜನವರಿ 2018, 19:30 IST
Last Updated 6 ಜನವರಿ 2018, 19:30 IST

ನವದೆಹಲಿ: ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ವಿರುದ್ಧ ಬಿಜೆಪಿಯ ರಾಜ್ಯಸಭಾ ಸದಸ್ಯ ಭೂಪಿಂದರ್‌ ಯಾದವ್‌ ನೀಡಿದ್ದ ಹಕ್ಕುಚ್ಯುತಿ ನೋಟಿಸ್‌ ಅನ್ನು ಸಭಾಪತಿ ಎಂ. ವೆಂಕಯ್ಯನಾಯ್ಡು ಅವರು ಲೋಕಸಭೆಯ ಸಭಾಧ್ಯಕ್ಷೆ ಸುಮಿತ್ರಾ ಮಹಾಜನ್‌ ಅವರಿಗೆ ಕಳುಹಿಸಿದ್ದಾರೆ.

ತಾವು ನೀಡಿದ್ದ ನೋಟಿಸ್‌ನ ಗತಿ ಏನಾಯಿತು ಎಂದು ಯಾದವ್‌ ಶುಕ್ರವಾರ ಸಭಾಪತಿಯನ್ನು ಕೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ನಾಯ್ಡು, ಇದು ಲೋಕಸಭೆಗೆ ಸಂಬಂಧಿಸಿದ ವಿಚಾರವಾಗಿದ್ದು ಸೂಕ್ತ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದರು.

ಹಣಕಾಸು ಸಚಿವ ಅರುಣ್‌ ಜೇಟ್ಲಿ ಲೇವಡಿ ಮಾಡಿದ್ದ ರಾಹುಲ್‌ ಟ್ವೀಟ್‌ಗೆ ಸಂಬಂಧಿಸಿದಂತೆ ಯಾದವ್‌ ಹಕ್ಕುಚ್ಯುತಿ ನೋಟಿಸ್‌ ನೀಡಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.