ADVERTISEMENT

ಸಲಿಂಗ ಕಾಮವನ್ನು ಅಪರಾಧವೆನ್ನುವ ಸೆಕ್ಷನ್‌ 377ರ ಮರುಪರೀಶಿಲನೆ ಅಗತ್ಯ : ಸುಪ್ರೀಂಕೋರ್ಟ್‌

ಏಜೆನ್ಸೀಸ್
Published 8 ಜನವರಿ 2018, 10:47 IST
Last Updated 8 ಜನವರಿ 2018, 10:47 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಸಲಿಂಗಕಾಮವನ್ನು ಅಪರಾಧವೆಂದು ಪರಿಗಣಿಸುವ ಭಾರತೀಯ ದಂಡ ಸಂಹಿತೆ(ಐಪಿಸಿ) ಸೆಕ್ಷನ್‌ 377ಕ್ಕೆ ಸಾಂವಿಧಾನಿಕ ಮಾನ್ಯತೆ ನೀಡಿರುವುದನ್ನು ಮರುಪರಿಶೀಲಿಸಲು ಸುಪ್ರೀಂಕೋರ್ಟ್‌ ನಿರ್ಧರಿಸಿದೆ.

ನವತೇಜ್‌ ಸಿಂಗ್‌ ಜೋಹಾರ್‌ ಎಂಬುವರು ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಂಡ ಮುಖ್ಯನ್ಯಾಯಮೂರ್ತಿ ದೀಪಕ್‌ ಮಿಶ್ರ ಅಧ್ಯಕ್ಷತೆಯ ತ್ರಿಸದಸ್ಯ ಪೀಠವು, ‘ಸಲಿಂಗಕಾಮವೆಂಬುದು ಅಪರಾಧವೇ ಅಥವಾ ಕಾನೂನುಬದ್ಧವೇ ಎಂಬುದನ್ನು ನಿರ್ಧರಿಸಲು ಹೆಚ್ಚು ಸದಸ್ಯರಿರುವ ನ್ಯಾಯಪೀಠ ಪರಿಶೀಲನೆ ನಡೆಸಬೇಕಿದೆ’ ಎಂದು ಅಭಿಪ್ರಾಯಪಟ್ಟಿದೆ.

ಸಲಿಂಗ ಕಾಮ ಕಾನುನು ಬದ್ಧ ಎಂದು ದೆಹಲಿ ಹೈಕೋರ್ಟ್‌ 2013ರಲ್ಲಿ ತೀರ್ಪು ನೀಡಿತ್ತು. ‘ಸಲಿಂಗ ಕಾಮ ಕ್ರಿಮಿನಲ್ ಅಪರಾಧ’ ಎಂದು ಹೇಳಿದ್ದ ಸುಪ್ರೀಂ ಕೋರ್ಟ್ ಈ ತೀರ್ಪನ್ನು ರದ್ದು ಗೊಳಿಸಿತ್ತು.

ADVERTISEMENT

ಐಪಿಸಿ ಸೆಕ್ಷನ್‌ 377ರಿಂದಾಗಿ ಸಲಿಂಗಿಗಳು ಅನಗತ್ಯವಾಗಿ ಕಾನೂನಿನ ಕ್ರಮಗಳನ್ನು ಎದುರಿಸುವಂತಾಗಿದೆ. ಸುಪ್ರೀಂಕೋರ್ಟ್‌ ತೀರ್ಪನ್ನು ಮರುಪರಿಶೀಲನೆ ಮಾಡಬೇಕು ಎಂದು ಅರ್ಜಿಗಳು ಸಲ್ಲಿಕೆಯಾಗಿದ್ದವು.

‘ಭಾರತೀಯ ದಂಡ ಸಂಹಿತೆ(ಐಪಿಸಿ)ಯ 377ನೇ ಸೆಕ್ಷನ್ ಯಾವುದೇ ರೀತಿಯ ಅಸ್ವಾಭಾವಿಕ ಲೈಂಗಿಕತೆ ಅಪರಾಧ ಎನ್ನುತ್ತದೆ. ಅಂದರೆ ಪರಸ್ಪರ ಒಪ್ಪಿಗೆ ಇದ್ದರೂ ಸಹಿತ ಅಸ್ವಾಭಾವಿಕವಾಗಿ ಒಬ್ಬ ಗಂಡಸು ಮತ್ತೊಬ್ಬ ಗಂಡಸಿನ ಜತೆ, ಹೆಣ್ಣು–ಹೆಣ್ಣಿನ ಜತೆ ಅಥವಾ ಪ್ರಾಣಿಗಳ ಜತೆ ಕಾಮಕೇಳಿ ಅಥವಾ ರತಿಕ್ರೀಡೆಯಲ್ಲಿ ತೊಡಗುವುದು 377ನೇ ಸೆಕ್ಷನ್ ಪ್ರಕಾರ ಅಪರಾಧ’.

ಸುಪ್ರೀಂಕೋರ್ಟ್‌ನ ಈ ನಿರ್ಧಾರವನ್ನು ಸಲಿಂಗಕಾಮದ ಪರವಾದ ಸಂಘಟನೆಗಳು ಸ್ವಾಗತಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.