ADVERTISEMENT

ಕಾರ್ತಿ ಅರ್ಜಿ: ಹಿಂದಕ್ಕೆ ಸರಿದ ಸಿಜೆಐ

ಪಿಟಿಐ
Published 10 ಜನವರಿ 2018, 19:30 IST
Last Updated 10 ಜನವರಿ 2018, 19:30 IST

ನವದೆಹಲಿ: ಅಕ್ರಮ ಹಣ ವರ್ಗಾವಣೆ ಆರೋಪ ಹೊತ್ತ, ಮಾಜಿ ಸಚಿವ ಪಿ.ಚಿದಂಬರಂ ಅವರ ಮಗ ಕಾರ್ತಿ ಚಿದಂಬರಂ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯಿಂದ ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ದೀಪಕ್‌ ಮಿಶ್ರಾ ಹಿಂದಕ್ಕೆ ಸರಿದಿದ್ದಾರೆ.

ತಾವು ದೆಹಲಿಯ ಹೈಕೋರ್ಟ್‌ ನ್ಯಾಯಮೂರ್ತಿಯಾಗಿದ್ದ ಸಂದರ್ಭದಲ್ಲಿ (ಪಿ.ಚಿದಂಬರಂ ಅವರು ಆರೋಪಿಯಾಗಿದ್ದ) 2ಜಿ ತರಂಗಾಂತರ ಹಂಚಿಕೆ ಪ್ರಕರಣದ ವಿಚಾರಣೆಯನ್ನು ನಡೆಸಿದ್ದರಿಂದ ಈ ಪ್ರಕರಣದ ವಿಚಾರಣೆಯನ್ನು ನಡೆಸುವುದು ಸರಿಯಲ್ಲ ಎಂದು ನ್ಯಾ.ಶರ್ಮ ಹೇಳಿದರು. ಜಾರಿ ನಿರ್ದೇಶನಾಲಯದ ಕ್ರಮ ಪ್ರಶ್ನಿಸಿ ಸಲ್ಲಿಸಿರುವ ಇದೇ ರೀತಿಯ ಇನ್ನೊಂದು ಪ್ರಕರಣ ನ್ಯಾಯಮೂರ್ತಿ ಅರುಣ್‌ ಮಿಶ್ರಾ ನೇತೃತ್ವದ ಪೀಠದ ಮುಂದೆ ವಿಚಾರಣೆಗೆ ಇದ್ದು, ಈ ಪ್ರಕರಣದ ವಿಚಾರಣೆಯನ್ನೂ ಅದೇ ಪೀಠ ನಡೆಸಲಿದೆ ಎಂದು ನ್ಯಾಯಮೂರ್ತಿಗಳು ಹೇಳಿದರು.

ಏರ್‌ಸೆಲ್-ಮ್ಯಾಕ್ಸಿಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಪಿ.ಚಿದಂಬರಂ ಅವರ ಮಗ ಕಾರ್ತಿ ಅವರಿಗೆ ಸೇರಿರುವ ₹1.16 ಕೋಟಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ (ಇ.ಡಿ) ಮುಟ್ಟುಗೋಲು ಹಾಕಿಕೊಂಡಿದೆ. ಕಾರ್ತಿ ಅವರಿಗೆ ಸೇರಿರುವ ಎರಡು ಬ್ಯಾಂಕ್‌ ಖಾತೆಯನ್ನೂ ಮುಟ್ಟುಗೋಲು ಹಾಕಿರುವ ಇ.ಡಿ, ಉಳಿತಾಯ ಖಾತೆಯಿಂದ ₹90 ಲಕ್ಷ ಹಾಗೂ ₹26 ಲಕ್ಷ ಭದ್ರತಾ ಠೇವಣಿಯನ್ನೂ ಮುಟ್ಟಗೊಲು ಹಾಕಿಕೊಂಡಿದೆ. ಇದನ್ನು ಕಾರ್ತಿ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ.

ADVERTISEMENT

ತಾವು ದೆಹಲಿಯ ಹೈಕೋರ್ಟ್‌ ನ್ಯಾಯಮೂರ್ತಿಯಾಗಿದ್ದ ಸಂದರ್ಭದಲ್ಲಿ (ಪಿ.ಚಿದಂಬರಂ ಅವರು ಆರೋಪಿಯಾಗಿದ್ದ) 2ಜಿ ತರಂಗಾಂತರ ಹಂಚಿಕೆ ಪ್ರಕರಣದ ವಿಚಾರಣೆಯನ್ನು ನಡೆಸಿದ್ದರಿಂದ ಈ ಪ್ರಕರಣದ ವಿಚಾರಣೆಯನ್ನು ನಡೆಸುವುದು ಸರಿಯಲ್ಲ ಎಂದು ನ್ಯಾ.ಶರ್ಮ ಹೇಳಿದರು. ಜಾರಿ ನಿರ್ದೇಶನಾಲಯದ ಕ್ರಮ ಪ್ರಶ್ನಿಸಿ ಸಲ್ಲಿಸಿರುವ ಇದೇ ರೀತಿಯ ಇನ್ನೊಂದು ಪ್ರಕರಣ ನ್ಯಾಯಮೂರ್ತಿ ಅರುಣ್‌ ಮಿಶ್ರಾ ನೇತೃತ್ವದ ಪೀಠದ ಮುಂದೆ ವಿಚಾರಣೆಗೆ ಇದ್ದು, ಈ ಪ್ರಕರಣದ ವಿಚಾರಣೆಯನ್ನೂ ಅದೇ ಪೀಠ ನಡೆಸಲಿದೆ ಎಂದು ನ್ಯಾಯಮೂರ್ತಿಗಳು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.