ADVERTISEMENT

ಆಂಧ್ರ: ಶಾಸಕರ ಮಕ್ಕಳು ಕಡ್ಡಾಯವಾಗಿ ಸರ್ಕಾರಿ ಶಾಲೆಗೆ

​ಪ್ರಜಾವಾಣಿ ವಾರ್ತೆ
Published 10 ಜನವರಿ 2018, 19:30 IST
Last Updated 10 ಜನವರಿ 2018, 19:30 IST

ಹೈದರಾಬಾದ್: ಶಾಸಕರು ತಮ್ಮ ಮಕ್ಕಳನ್ನು ತಮ್ಮ ಕ್ಷೇತ್ರದಲ್ಲೇ ಇರುವ ಸರ್ಕಾರಿ ಶಾಲೆಗೆ ಸೇರಿಸುವುದನ್ನು ಕಡ್ಡಾಯಗೊಳಿ
ಸುವ ಮಸೂದೆ ರಚಿಸಲು ಆಂಧ್ರಪ್ರದೇಶ ಸರ್ಕಾರ ಮುಂದಾಗಿದೆ.

‘ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳ ಶಿಕ್ಷಣವನ್ನು ಡಿಜಿಟಲೀಕರಣಗೊಳಿಸಲು ಸರ್ಕಾರ ಈಗಾಗಲೇ ಕ್ರಮ ತೆಗೆದುಕೊಂಡಿದೆ. ಸರ್ಕಾರಿ ಶಾಲೆಗಳನ್ನು ಉಳಿಸುವ ಕ್ರಮದ ಅಂಗವಾಗಿ ಶಾಸಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೇ ಸೇರಿಸುವುದು ಕಡ್ಡಾಯವಾಗಲಿದೆ’ ಎಂದು ಸಚಿವೆ ಭೂಮಾ ಅಖಿಲ ಪ್ರಿಯಾ ಹೇಳಿದ್ದಾರೆ.

‘ಈ ಬದಲಾವಣೆಗೆ ಮುಖ್ಯಮಂತ್ರಿ ಚಂದ್ರ ಬಾಬು ನಾಯ್ಡು ತಮ್ಮ ಮನೆಯಿಂದಲೇ ನಾಂದಿ ಹಾಡಿದ್ದಾರೆ. ಅವರು ತಮ್ಮ ಮೊಮ್ಮಗನನ್ನು ಸರ್ಕಾರಿ ಶಾಲೆಗೆ ಸೇರಿಸಿದ್ದಾರೆ. ಇದು ಅವರ ಬದ್ಧತೆಯನ್ನು ತೋರಿಸುತ್ತದೆ’ ಎಂದು ಅವರು ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.