ಅಹಮದಾಬಾದ್: ಪ್ರಧಾನಿ ಮೋದಿ ಅವರು ತಮ್ಮ ತವರು ರಾಜ್ಯವಾದ ಗುಜರಾತಿನ ಅಹಮದಾಬಾದ್ಗೆ ಬಂದಿಳಿದ ಇಸ್ರೇಲ್ ಪ್ರಧಾನಿ ಬೆಂಜಾಮಿನ್ ನೆತನ್ಯಾಹು ದಂಪತಿಗೆ ಅದ್ದೂರಿ ಸ್ವಾಗತ ಕೋರಿದ್ದಾರೆ.
ಪ್ರಧಾನಿ ಜತೆಗೂಡಿ ನೆತನ್ಯಾಹು ದಂಪತಿ ಅಹಮದಾಬಾದ್ನಲ್ಲಿ 8 ಕಿ.ಮೀ ರೋಡ್ ಶೋ ನಡೆಸಿದ ಬಳಿಕ ಸಬರಾಮತಿ ಆಶ್ರಮಕ್ಕೆ ಭೇಟಿ ನೀಡಿದ್ದಾರೆ.
ಈ ವೇಳೆ ರಾಷ್ಟ್ರಪಿತ ಮಹಾತ್ಮಗಾಂಧಿಗೆ ಗೌರವ ಸಲ್ಲಿಸಿದ ಬೆಂಜಾಮಿನ್ ನೆತನ್ಯಾಹು ದಂಪತಿ ಚರಕದಿಂದ ನೂಲು ತೆಗೆಯಲು ಪ್ರಯತ್ನಿಸಿದ್ದಾರೆ.
2014ರಲ್ಲಿ ಅಧಿಕಾರಕ್ಕೆ ಬಂದ ನಂತರ ಮೋದಿ ಅವರು ಹೊರದೇಶಗಳ ಮುಖ್ಯಸ್ಥರಿಗೆ ತವರು ನೆಲದಲ್ಲಿ ಅದ್ಧೂರಿ ಸ್ವಾಗತ ನೀಡುತ್ತಿರುವುದು ಇದು ಮೂರನೇ ಬಾರಿ. ಈ ಮೊದಲು, ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಮತ್ತು ಜಪಾನ್ ಪ್ರಧಾನಿ ಶಿಂಜೋ ಅಬೆ ಅವರಿಗೆ ಭರ್ಜರಿ ಆತಿಥ್ಯ ನೀಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.