ADVERTISEMENT

ವಿಷಾಹಾರ ಶಂಕೆ: 30 ಮಕ್ಕಳು ಅಸ್ವಸ್ಥ

ಪಿಟಿಐ
Published 18 ಜನವರಿ 2018, 19:20 IST
Last Updated 18 ಜನವರಿ 2018, 19:20 IST

ಠಾಣೆ: ಇಲ್ಲಿಗೆ ಸಮೀಪದ ಛಿವಂಡಿ ಎಂಬ ಹಳ್ಳಿಯಲ್ಲಿನ ಮದರಸಾದಲ್ಲಿ ಹಬ್ಬದ ಪ್ರಯುಕ್ತ ಆಯೋಜಿಸಿದ್ದ ಮಧ್ಯಾಹ್ನದ ಉಟದ ನಂತರ 30ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿದ್ದಾರೆ. ವಿಷಾಹಾರ ಸೇವನೆಯಿಂದ ಮಕ್ಕಳು ಅಸ್ವಸ್ಥರಾಗಿರುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಉಟದ ನಂತರ ಮಕ್ಕಳಲ್ಲಿ ವಾಂತಿ, ಹೊಟ್ಟೆನೋವು ಕಾಣಿಸಿಕೊಂಡಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸಮಸ್ಯೆ ಉಲ್ಬಣಿಸಿದ ಕಾರಣ ಮುಂಬೈ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಪ್ರಕರಣದ ತನಿಖೆಗೆ ಆದೇಶಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT