ADVERTISEMENT

ಕಾರಿಗೆ ರಕ್ತದ ಕಲೆಯಾಗುತ್ತದೆಂದು ಅಪಘಾತಕ್ಕೀಡಾದ ಯುವಕರನ್ನು ನಡುರಸ್ತೆಯಲ್ಲೇ ಬಿಟ್ಟ ಪೊಲೀಸರು

ಏಜೆನ್ಸೀಸ್
Published 20 ಜನವರಿ 2018, 5:07 IST
Last Updated 20 ಜನವರಿ 2018, 5:07 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಲಖನೌ: ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿರುವ ಯುವಕರನ್ನು ಆಸ್ಪತ್ರೆಗೆ ಕರೆದೊಯ್ಯಲು, ಕಾರಿಗೆ ರಕ್ತದ ಕಲೆಯಾಗುತ್ತದೆಂದು ಪೊಲೀಸರು ನಿರಾಕರಿಸಿದ ಅಮಾನವೀಯ ಘಟನೆ ಉತ್ತರ ಪ್ರದೇಶದ ಸಹರಾನ್‌ಪುರದಲ್ಲಿ ನಡೆದಿದೆ. ಪರಿಣಾಮವಾಗಿ ಯುಕವರು ಮೃತಪಟ್ಟಿದ್ದಾರೆ.

ಘಟನೆಗೆ ಸಂಬಂಧಿಸಿದ ವಿಡಿಯೊ ಇದೀಗ ವೈರಲ್ ಆಗಿದೆ.

ಬೈಕ್‌ನಲ್ಲಿ ಸಂಚರಿಸುತ್ತಿದ್ದ ಯುವಕರಿಬ್ಬರು ಗುರುವಾರ ರಾತ್ರಿ ರಸ್ತೆ ಅಪಘಾತಕ್ಕೀಡಾಗಿದ್ದರು. ಸ್ಥಳದಲ್ಲಿದ್ದ ಕೆಲವರು ಸಹಾಯಕ್ಕಾಗಿ ಪೊಲೀಸರನ್ನು ಕೂಗಿ ಕರೆದಿದ್ದಾರೆ. ಆದರೆ, ಕಾರಿಗೆ ರಕ್ತದ ಕಲೆಯಾಗುತ್ತದೆ ಎಂಬ ಕಾರಣಕ್ಕಾಗಿ ಗಾಯಾಳುಗಳನ್ನು ಕರೆದೊಯ್ಯಲು ಪೊಲೀಸರು ನಿರಾಕರಿಸಿದ್ದಾರೆ.

ADVERTISEMENT

‘ಸರ್, ನಿಮ್ಮ ಕಾರನ್ನು ತೊಳೆಯಬಹುದು. ದಯಮಾಡಿ ಬಾಗಿಲು ತೆಗೆಯಿರಿ’ ಎಂದು ಸ್ಥಳದಲ್ಲಿದ್ದ ವ್ಯಕ್ತಿಯೊಬ್ಬರು ಅಂಗಲಾಚಿದ್ದರು. ಇದಕ್ಕೆ ಉತ್ತರಿಸಿದ್ದ ಪೊಲೀಸರು, ‘ಕಾರನ್ನು ತೊಳೆಯಲು ಕೊಟ್ಟರೆ ನಾವೆಲ್ಲಿ ಕುಳಿತುಕೊಳ್ಳಲಿ’ ಎಂದು ಉಡಾಫೆಯ ಉತ್ತರ ನೀಡಿದ್ದಾರೆ.

ನಂತರ ಸ್ಥಳೀಯರು ಆಟೊವೊಂದರಲ್ಲಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ, ಅಷ್ಟರಲ್ಲಿ ಇಬ್ಬರೂ ಮೃತಪಟ್ಟಿದ್ದಾರೆ.

</p></p>

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.