ADVERTISEMENT

ಉತ್ತರ ಪ್ರದೇಶ: ದಲಿತ ಬಾಲಕಿ ಸಜೀವ ದಹನ

ಪಿಟಿಐ
Published 23 ಜನವರಿ 2018, 20:12 IST
Last Updated 23 ಜನವರಿ 2018, 20:12 IST

ಪ್ರತಾಪಗಢ: ಇಲ್ಲಿನ ಲಾಲ್‌ಗಂಜ್‌ನಲ್ಲಿ 19 ವರ್ಷದ ದಲಿತ ಬಾಲಕಿಯನ್ನು ಸಜೀವವಾಗಿ ದಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದೀಪ್ ಹಾಗೂ ಆತನ ತಂದೆ, ಮಿಥಾಯಿಲಾಲ್ ಎನ್ನುವವರ ಮನೆಗೆ ನುಗ್ಗಿ ಅವರ ಮಗಳು ಅಂಜು ಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾರೆ. ಪ್ರಕರಣ ನಡೆದ ವೇಳೆ ಅಂಜು ಮನೆಯಲ್ಲಿ ಒಬ್ಬರೇ ಇದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ವೇಳೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಪ್ರಕರಣ ಸಂಬಂಧ ಎಫ್‌ಐಆರ್ ದಾಖಲಿಸಲಾಗಿದೆ. ಆದರೆ ಈತನಕ ಯಾರನ್ನೂ ಬಂಧಿಸಿಲ್ಲ ಎಂದು ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.