ADVERTISEMENT

ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಅಖಿಲೇಶ್ ಯಾದವ್

ಹೆಚ್ಚುತ್ತಿರುವ ಅಪರಾಧ ಸಂಖ‌್ಯೆಯ ಬಗ್ಗೆ ಖಂಡನೆ

ಏಜೆನ್ಸೀಸ್
Published 25 ಜನವರಿ 2018, 14:35 IST
Last Updated 25 ಜನವರಿ 2018, 14:35 IST
ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಅಖಿಲೇಶ್ ಯಾದವ್
ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಅಖಿಲೇಶ್ ಯಾದವ್   

ಲಖನೌ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ನೇತೃತ್ವದ ಆಡಳಿತ ವ್ಯವಸ್ಥೆಯಲ್ಲಿ ಏರಿಕೆಯಾಗುತ್ತಿರುವ ಅಪರಾಧಗಳು ಹಾಗೂ ಹದಗೆಡುತ್ತಿರುವ ಕಾನೂನು ಸುವ್ಯವಸ್ಥೆಯಿಂದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಪಾಯದ ಮುನ್ಸೂಚನೆ ಎದುರಾಗಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅಭಿಪ್ರಾಯಪಟ್ಟಿದ್ದಾರೆ.

ಆದಿತ್ಯನಾಥ ಅವರು ಪ್ರಜಾಪ್ರಭುತ್ವದ ಎಲ್ಲಾ ನಿಯಮಗಳನ್ನು ಗಾಳಿಗೆ ತೂರುತ್ತಿದ್ದಾರೆ. ಸರ್ಕಾರದ ವಿರುದ್ಧದ ದನಿಗಳನ್ನು ಅಡಗಿಸುತ್ತಿದ್ದಾರೆ ಎಂದು ಯಾದವ್ ಹೇಳಿದ್ದಾರೆ.

ಬುಧವಾರ ಹಾಡಹಗಲೇ ಮೀರತ್‌ನಲ್ಲಿ ನಡೆದ ಎರಡು ಕೊಲೆಗಳ ಕುರಿತು ಮಾತನಾಡಿದ ಅಖಿಲೇಶ್, ರಾಜ್ಯದಲ್ಲಿ ಬಿಜೆಪಿ ಅಧಿಕಾರ ಚುಕ್ಕಾಣಿ ಹಿಡಿದ ಮೇಲೆ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಆರೋಪಿಸಿದ್ದಾರೆ.

ADVERTISEMENT

ಅಲ್ಲದೇ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಅವರು ಕೂಡ ರಾಜ್ಯದ ವ್ಯವಸ್ಥೆ ಉತ್ತಮಪಡಿಸಬೇಕು ಎಂದು ಬುಧವಾರ ತಾಕೀತು ಮಾಡಿದರು ಎಂದು ಹೇಳಿದ್ದಾರೆ. 

ಬುಧವಾರ ರಾಜ್ಯಪಾಲ ರಾಮ್ ನಾಯ್ಕ ಅವರನ್ನು ಭೇಟಿ ಮಾಡಿದ ಅಖಿಲೇಶ್ ರಾಜ್ಯದ ಪರಿಸ್ಥಿತಿ ಬಗ್ಗೆ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.