ADVERTISEMENT

2018-19ನೇ ಸಾಲಿನಲ್ಲಿ ಶೇ 7ರಿಂದ 7.5 ಜಿಡಿಪಿ ಬೆಳವಣಿಗೆ ದರ ನಿರೀಕ್ಷೆ

ಏಜೆನ್ಸೀಸ್
Published 29 ಜನವರಿ 2018, 8:36 IST
Last Updated 29 ಜನವರಿ 2018, 8:36 IST
2017–18ನೇ ಸಾಲಿನ ಆರ್ಥಿಕ ಸಮೀಕ್ಷೆ ಬಗ್ಗೆ ಕೇಂದ್ರ ಸರ್ಕಾರದ ಮುಖ್ಯ ಆರ್ಥಿಕ ಸಲಹೆಗಾರ ಡಾ. ಅರವಿಂದ ಸುಬ್ರಮಣಿಯನ್ ಮಾಧ್ಯಮಗಳಿಗೆ ವಿವರಣೆ ನೀಡಿದರು. - ಎಎನ್‌ಐ ಚಿತ್ರ
2017–18ನೇ ಸಾಲಿನ ಆರ್ಥಿಕ ಸಮೀಕ್ಷೆ ಬಗ್ಗೆ ಕೇಂದ್ರ ಸರ್ಕಾರದ ಮುಖ್ಯ ಆರ್ಥಿಕ ಸಲಹೆಗಾರ ಡಾ. ಅರವಿಂದ ಸುಬ್ರಮಣಿಯನ್ ಮಾಧ್ಯಮಗಳಿಗೆ ವಿವರಣೆ ನೀಡಿದರು. - ಎಎನ್‌ಐ ಚಿತ್ರ   

ನವದೆಹಲಿ: ಪ್ರಸಕ್ತ ವಿತ್ತ ವರ್ಷದಲ್ಲಿ ದೇಶದ ಜಿಡಿಪಿ ಬೆಳವಣಿಗೆ ದರ ಪ್ರಮಾಣ ಶೇ 6.75ರಷ್ಟಿರಲಿದ್ದು, 2018–19ನೇ ಸಾಲಿನಲ್ಲಿ ಶೇ 7ರಿಂದ 7.5ರಷ್ಟಿರಲಿದೆ ಎಂದು ಆರ್ಥಿಕ ಸಮೀಕ್ಷೆಯಲ್ಲಿ ಅಂದಾಜಿಸಲಾಗಿದೆ.

2017–18ನೇ ಸಾಲಿನ ಆರ್ಥಿಕ ಸಮೀಕ್ಷೆಯನ್ನು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಸೋಮವಾರ ಸಂಸತ್ತಿನಲ್ಲಿ ಮಂಡಿಸಿದರು.

‘ಸರ್ಕಾರ ಕೈಗೊಂಡಿರುವ ಪ್ರಮುಖ ಸುಧಾರಣಾ ಕ್ರಮಗಳಿಂದಾಗಿ ಪ್ರಸಕ್ತ ಸಾಲಿನಲ್ಲಿ ಜಿಡಿಪಿ ಬೆಳವಣಿಗೆ ದರ ಶೇ 6.75 ತಲುಪಲಿದ್ದು, 2018–19ನೇ ಸಾಲಿನಲ್ಲಿ ಶೇ 7ರಿಂದ 7.5ರಷ್ಟಾಗಲಿದೆ’ ಎಂದು ಸಮೀಕ್ಷೆಯಲ್ಲಿ ಹೇಳಲಾಗಿದೆ.

ADVERTISEMENT

2014–15ನೇ ಸಾಲಿನಲ್ಲಿ ಜಿಡಿಪಿ ಬೆಳವಣಿಗೆಯ ಸರಾಸರಿ ಪ್ರಮಾಣ ಶೇ 7.3ರಷ್ಟಿತ್ತು. ಇದು ವಿಶ್ವದ ಪ್ರಮುಖ ಆರ್ಥಿಕ ಸದೃಢ ರಾಷ್ಟ್ರಗಳಿಗಿಂತಲೂ ಹೆಚ್ಚು ಎಂದು ಸಮೀಕ್ಷೆಯಲ್ಲಿ ಹೇಳಲಾಗಿದೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾಗುತ್ತಿರುವುದು ಜಿಡಿಪಿ ಬೆಳವಣಿಗೆ ದರ ಹೆಚ್ಚಳಕ್ಕೆ ತೊಡಕಾಗಬಹುದಾದರೂ ಇತರ ಅನೇಕ ಅಂಶಗಳು ಜಿಡಿಪಿ ವೃದ್ಧಿಗೆ ನೆರವಾಗಲಿದೆ ಎಂಬ ಅಂಶವನ್ನೂ ಸಮೀಕ್ಷೆಯಲ್ಲಿ ಉಲ್ಲೇಖಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.