ADVERTISEMENT

ಮಾಲೆಗಾಂವ್ ಸ್ಫೋಟ ಪ್ರಕರಣ: ಮಹಾರಾಷ್ಟ್ರ ಸರ್ಕಾರ, ಎನ್‌ಐಎ ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್

ಏಜೆನ್ಸೀಸ್
Published 29 ಜನವರಿ 2018, 11:41 IST
Last Updated 29 ಜನವರಿ 2018, 11:41 IST
ಮಾಲೆಗಾಂವ್ ಸ್ಫೋಟ ಪ್ರಕರಣ: ಮಹಾರಾಷ್ಟ್ರ ಸರ್ಕಾರ, ಎನ್‌ಐಎ ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್
ಮಾಲೆಗಾಂವ್ ಸ್ಫೋಟ ಪ್ರಕರಣ: ಮಹಾರಾಷ್ಟ್ರ ಸರ್ಕಾರ, ಎನ್‌ಐಎ ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್   

ನವದೆಹಲಿ: ಮಾಲೆಗಾಂವ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಕರ್ನಲ್ ಶ್ರೀಕಾಂತ್ ಪುರೋಹಿತ್ ಅವರನ್ನು ಕಾನೂನುಬಾಹಿರ ಚಟುವಟಿಕೆ ತಡೆ ಕಾಯ್ದೆ (ಯುಎಪಿಎ) ಅಡಿ ವಿಚಾರಣೆ ನಡೆಸುವ ಬಗ್ಗೆ ನಾಲ್ಕು ವಾರಗಳಲ್ಲಿ ಪ್ರತಿಕ್ರಿಯೆ ನೀಡುವಂತೆ ಎನ್‌ಐಎ ಹಾಗೂ ಮಹಾರಾಷ್ಟ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.

ಪುರೋಹಿತ್ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಈ ಸೂಚನೆ ನೀಡಿದೆ.

ಯುಎಪಿಎ ಅಡಿ ವಿಚಾರಣೆ ನಡೆಸುವಂತೆ ಸೂಚಿಸಿದ ಪ್ರಾಧಿಕಾರದ ನಿರ್ದೇಶನ ಪ್ರಶ್ನಿಸಿ ಪುರೋಹಿತ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿಗಳಾದ ಆರ್.ಕೆ. ಆಗರ್ವಾಲ್ ಹಾಗೂ ಎ.ಎಂ. ಸಪ್ರೆ ಅವರಿದ್ದ ಪೀಠ ಅರ್ಜಿಯ ವಿಚಾರಣೆ ನಡೆಸಿತು.

ADVERTISEMENT

ಪುರೋಹಿತ್ ಹಾಗೂ ಮತ್ತೊಬ್ಬ ಆರೋಪಿ ಸಮೀರ್ ಕುಲಕರ್ಣಿ ಸಲ್ಲಿಸಿದ್ದ ಅರ್ಜಿಯನ್ನು ಕಳೆದ ಡಿಸೆಂಬರ್ 18ರಂದು ಬಾಂಬೆ ಹೈಕೋರ್ಟ್ ವಜಾಗೊಳಿಸಿತ್ತು. ಸದ್ಯ ಇಬ್ಬರೂ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.