ADVERTISEMENT

ಭಯೋತ್ಪಾದಕರಿಗೆ ಹಣ ವರ್ಗಾವಣೆ ಆರೋಪ: ಶಬೀರ್‌ ಜಾಮೀನು ಅರ್ಜಿ ವಜಾ

ಪಿಟಿಐ
Published 31 ಜನವರಿ 2018, 19:30 IST
Last Updated 31 ಜನವರಿ 2018, 19:30 IST

ನವದೆಹಲಿ: ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಕಾಶ್ಮೀರದ ಪ್ರತ್ಯೇಕವಾದಿ ನಾಯಕ ಶಬೀರ್‌ ಶಾ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ದೆಹಲಿಯ ನ್ಯಾಯಾಲಯ ಬುಧವಾರ ವಜಾ ಮಾಡಿದೆ.

ಉಗ್ರರಿಗೆ ಹಣಕಾಸು ನೆರವು ನೀಡಲು ಈತ 2007ರಲ್ಲಿ ಹಣ ಅಕ್ರಮ ವರ್ಗಾವಣೆ ಮಾಡಿದ್ದ ಎಂದು ಆರೋಪಿಸಲಾಗಿತ್ತು.

ಹೆಚ್ಚುವರಿ ಸೆಷನ್ಸ್‌ ನ್ಯಾಯಾಧೀಶ ಸಿದ್ಧಾರ್ಥ ಶರ್ಮಾ ಅವರು ಜಾಮೀನು ಅರ್ಜಿಯನ್ನು ವಜಾ ಮಾಡಿದ್ದಾರೆ.

ADVERTISEMENT

ಭಾರತದಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ಉತ್ತೇಜಿಸಲು ಶಾ ಪಾಕಿಸ್ತಾನದಿಂದ ಹಣ ಪಡೆದಿರಬಹುದೇ ಎಂಬುದರ ಕುರಿತು ತನಿಖೆ ನಡೆಯುತ್ತಿದೆ ಎಂದು ಜಾರಿ ನಿರ್ದೇಶನಾಲಯವು ತಿಳಿಸಿದ ಕಾರಣ ಕಳೆದ ಆಗಸ್ಟ್‌ನಲ್ಲೂ ಈತನ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾ ಮಾಡಿತ್ತು.

ಪ್ರಕರಣಲ್ಲಿ ಶಬೀರ್‌ ಶಾ ಮತ್ತು ಹವಾಲ ಏಜೆಂಟ್‌ ಮೊಹಮ್ಮದ್‌ ಅಸ್ಲಾಂ ವಾನಿ ವಿರುದ್ಧ ನವೆಂಬರ್‌ 15 ರಂದು ನ್ಯಾಯಾಲಯ ಆರೋಪಪಟ್ಟಿ ನಿಗದಿ ಪಡಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.