ಸೇಲಂ, ತಮಿಳುನಾಡು (ಪಿಟಿಐ): ಅನುಮತಿ ಪಡೆಯದೇ ಆಯೋಜಿಸಿದ್ದ ಜಲ್ಲಿಕಟ್ಟು ಸ್ಪರ್ಧೆಯಲ್ಲಿ ಹೋರಿ ಹಾದು ವ್ಯಕ್ತಿಯೊಬ್ಬ ಮೃತಪಟ್ಟಿದ್ದಾನೆ. ಈ ವೇಳೆ ನಾಲ್ವರು ಗಾಯಗೊಂಡಿದ್ದಾರೆ. ನಕಿಯಂಪಟ್ಟಿಯಲ್ಲಿ ನಡೆದ ಈ ಸ್ಪರ್ಧೆಯಲ್ಲಿ ಸುಮಾರು 100 ಹೋರಿಗಳು ಭಾಗಿಯಾಗಿದ್ದವು.
ಪ್ರೇಕ್ಷಕರ ಗ್ಯಾಲರಿಯತ್ತ ಏಕಾಏಕಿ ನುಗ್ಗಿದ ಹೋರಿಯು 25 ವರ್ಷದ ಯುವಕನ ಹೊಟ್ಟೆಯನ್ನು ತಿವಿದು ಗಂಭೀರವಾಗಿ ಗಾಯಗೊಳಿಸಿತು. ಆಸ್ಪತ್ರೆಗೆ ಸೇರಿಸಿದರೂ ಆತ ಬದುಕುಳಿಯಲಿಲ್ಲ. ತಕ್ಷಣ ಸ್ಪರ್ಧೆಯನ್ನು ಸ್ಥಗಿತಗೊಳಿಸಲಾಯತು. ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.