ADVERTISEMENT

ಲಿಂಗ ತಾರತಮ್ಯ: ಅರ್ಜಿ ವಜಾ

​ಪ್ರಜಾವಾಣಿ ವಾರ್ತೆ
Published 2 ಫೆಬ್ರುವರಿ 2018, 19:30 IST
Last Updated 2 ಫೆಬ್ರುವರಿ 2018, 19:30 IST

ನವದೆಹಲಿ: ಅತ್ಯಾಚಾರ, ಲೈಂಗಿಕ ಕಿರುಕುಳ ಮೊದಲಾದ ಅಪರಾಧಗಳಲ್ಲಿ ಲಿಂಗ ತಾರತಮ್ಯ ಮಾಡದಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಶುಕ್ರವಾರ ವಜಾಗೊಳಿಸಿದೆ.

ಅತ್ಯಾಚಾರದಂತಹ ಅಪರಾಧದಲ್ಲಿ ಮಹಿಳೆಯನ್ನೂ ಶಿಕ್ಷಿಸಬೇಕು ಎಂದು ವಕೀಲ ರಿಷಿ ಮಲ್ಹೋತ್ರಾ ವಾದಿಸಿದರು. ‘ಕಾನೂನು ಪುರುಷ–ಮಹಿಳೆಯರ ಮಧ್ಯೆ ತಾರತಮ್ಯ ಮಾಡಬಾರದು. ಈ ಅಪರಾಧಕ್ಕಾಗಿ ಪುರುಷನು ಮಾತ್ರ ಶಿಕ್ಷೆಗೆ ಒಳಗಾಗುತ್ತಿದ್ದಾನೆ’ ಎಂದರು.

‘ಮಹಿಳೆಯು ಅತ್ಯಾಚಾರದಂತಹ ಅಪರಾಧಗಳಲ್ಲಿ ತೊಡಗುವುದಿಲ್ಲ ಎಂದು ನಾವು ಹೇಳುತ್ತಿಲ್ಲ. ಆದರೆ ಭಾರತೀಯ ದಂಡ ಸಂಹಿತೆಯಲ್ಲಿ ಇದಕ್ಕೆ ಬೇರೆ ಕಾನೂನುಗಳಿವೆ’ ಎಂದು ನ್ಯಾಯಮೂರ್ತಿಗಳಾದ ದೀಪಕ್ ಮಿಶ್ರಾ, ಎ.ಎಂ. ಖಾನ್ವಿಲ್ಕರ್ ಹಾಗೂ ಡಿ.ವೈ. ಚಂದ್ರಚೂಡ್ ಅವರ ಪೀಠ ಹೇಳಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.