ADVERTISEMENT

ಕಾಸ್‌ಗಂಜ್: ಧಾರ್ಮಿಕ ಕೇಂದ್ರದ ದ್ವಾರಕ್ಕೆ ಬೆಂಕಿ ಹಚ್ಚಿ ಗಲಭೆಗೆ ಯತ್ನ

ಏಜೆನ್ಸೀಸ್
Published 5 ಫೆಬ್ರುವರಿ 2018, 13:49 IST
Last Updated 5 ಫೆಬ್ರುವರಿ 2018, 13:49 IST
ಕಾಸ್‌ಗಂಜ್‌ನಲ್ಲಿ ಬಿಗಿ ಭದ್ರತೆ – ಎಎನ್‌ಐ ಚಿತ್ರ
ಕಾಸ್‌ಗಂಜ್‌ನಲ್ಲಿ ಬಿಗಿ ಭದ್ರತೆ – ಎಎನ್‌ಐ ಚಿತ್ರ   

ಕಾಸ್‌ಗಂಜ್: ಉತ್ತರ ಪ್ರದೇಶದ ಕಾಸ್‌ಗಂಜ್‌ನ ಧಾರ್ಮಿಕ ಕೇಂದ್ರವೊಂದರ ದ್ವಾರಕ್ಕೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ ಘಟನೆ ಸೋಮವಾರ ನಡೆದಿದೆ.

ಇದರಿಂದಾಗಿ ಕೆಲ ಕಾಲ ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು. ಆದರೆ, ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಬೆಂಕಿಯನ್ನು ನಂದಿಸಿದರಲ್ಲದೆ, ಬಿಗಿ ಬಂದೋಬಸ್ತ್ ಏರ್ಪಡಿಸಿದರು.

ಜಿಲ್ಲಾ ಮ್ಯಾಜಿಸ್ಟ್ರೇಟ್ ಆರ್‌.ಪಿ. ಸಿಂಗ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಘಟನಾ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

ADVERTISEMENT

ಈ ಮಧ್ಯೆ, ಕರ್ತವ್ಯ ಲೋಪದ ಆರೋಪದಲ್ಲಿ ಇಬ್ಬರು ಕಾನ್‌ಸ್ಟೆಬಲ್‌ಗಳನ್ನು ಅಮಾನತು ಮಾಡಲಾಗಿದೆ.

ಗಣರಾಜ್ಯೋತ್ಸವ ಆಚರಣೆ ಸಂದರ್ಭ ಮಥುರಾ–ಬರೇಲಿ ಹೆದ್ದಾರಿಯಲ್ಲಿ ಆಯೋಜಿಸಿದ್ದ ಬೈಕ್ ರ‍್ಯಾಲಿ ವೇಳೆ ಕಾಸ್‌ಗಂಜ್‌ನಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ, ಕಲ್ಲು ತೂರಾಟ ನಡೆದ ಪರಿಣಾಮ ಚಂದನ್ ಗುಪ್ತಾ ಎಂಬುವವರು ಮೃತಪಟ್ಟು ಇಬ್ಬರು ಗಾಯಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.