ADVERTISEMENT

₹10 ರ ನಾಣ್ಯ ನುಂಗಿ ಮಗು ಸಾವು

ಪಿಟಿಐ
Published 5 ಫೆಬ್ರುವರಿ 2018, 19:30 IST
Last Updated 5 ಫೆಬ್ರುವರಿ 2018, 19:30 IST

ನಾಸಿಕ್ : ಇಲ್ಲಿನ ಚಾಂದ್‌ಗಿರಿ ಪ್ರದೇಶದಲ್ಲಿ ಹತ್ತು ರೂಪಾಯಿ ನಾಣ್ಯ ನುಂಗಿದ ನಾಲ್ಕು ವರ್ಷದ ಹೆಣ್ಣು ಮಗುವೊಂದು  ಸೋಮವಾರ ಮೃತಪಟ್ಟಿದೆ.

‘ತಿನ್ನಲು ಏನನ್ನಾದರೂ ಕೊಡುವಂತೆ ಮಗು ಕೇಳಿತ್ತು. ಆಗ ತಾಯಿ ಹತ್ತು ರೂಪಾಯಿ ನಾಣ್ಯ ಕೊಟ್ಟು ಅಂಗಡಿಯಲ್ಲಿ ಏನಾದರೂ ತೆಗೆದುಕೊಂಡು ತಿನ್ನಲು ಹೇಳಿದ್ದರು. ನಾಣ್ಯದೊಂದಿಗೆ ಆಟವಾಡುತ್ತಿದ್ದ ಮಗು ಆಕಸ್ಮಿಕವಾಗಿ ಅದನ್ನು ನುಂಗಿದೆ’ ಎಂದು ಪೊಲೀಸರು ಹೇಳಿದ್ದಾರೆ.

ಪಾಲಕರು ಮಗುವನ್ನು ಮೊದಲು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ನಂತರ ಅತ್ಯಾಧುನಿಕ ಸೌಲಭ್ಯಗಳಿರುವ ದೂರದ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ವೇಳೆಯೇ ಮಗು ಕೊನೆಯುಸಿರೆಳೆದಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.