ADVERTISEMENT

ಮಹದಾಯಿ: ಪ್ರಧಾನಿ ಎದುರೇ ಜಟಾಪಟಿ

ಲೋಕಸಭೆಯಲ್ಲಿ ಪ್ರಸ್ತಾಪ; ಆರೋಪ, ಪ್ರತ್ಯಾರೋಪ

​ಪ್ರಜಾವಾಣಿ ವಾರ್ತೆ
Published 6 ಫೆಬ್ರುವರಿ 2018, 19:30 IST
Last Updated 6 ಫೆಬ್ರುವರಿ 2018, 19:30 IST
ಮಹದಾಯಿ: ಪ್ರಧಾನಿ ಎದುರೇ ಜಟಾಪಟಿ
ಮಹದಾಯಿ: ಪ್ರಧಾನಿ ಎದುರೇ ಜಟಾಪಟಿ   

ನವದೆಹಲಿ: ಮಹದಾಯಿ ನದಿ ನೀರು ಹಂಚಿಕೆಗಾಗಿ ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸಬೇಕು ಎಂಬ ವಿಷಯದ ಬಗ್ಗೆ ಲೋಕಸಭೆಯಲ್ಲಿ ಮಂಗಳವಾರ ಕಾಂಗ್ರೆಸ್ ಮತ್ತು ಬಿಜೆಪಿ ಸದಸ್ಯರ ನಡುವೆ ಜಟಾಪಟಿ ನಡೆಯಿತು. ಪ್ರಧಾನಿ ಸಮ್ಮುಖದಲ್ಲೇ ಉಭಯ ಪಕ್ಷಗಳ ಸದಸ್ಯರು ಪರಸ್ಪರ ಆರೋಪ, ಪ್ರತ್ಯಾರೋಪ ಮಾಡಿದರು.

ರಾಷ್ಟ್ರಪತಿ ಭಾಷಣದ ಮೇಲಿನ ಚರ್ಚೆಯ ವೇಳೆ ಈ ವಿಷಯ ಪ್ರಸ್ತಾಪಿಸಿದ ಕಾಂಗ್ರೆಸ್‌ ಸದಸ್ಯರು, ‘ರಾಜ್ಯಕ್ಕೆ ಮಹದಾಯಿ ನದಿ ನೀರು ಒದಗಿಸುವ ನಿಟ್ಟಿನಲ್ಲಿ ಪ್ರಧಾನಿ ಸಂಧಾನಕ್ಕೆ ಮುಂದಾಗಬೇಕು’ ಎಂದು ಒಕ್ಕೊರಲಿನಿಂದ ಆಗ್ರಹಿಸಿದರು.

‘ರಾಜ್ಯಕ್ಕೆ ಮಹದಾಯಿ ನೀರು ನೀಡುವುದಕ್ಕೆ ಗೋವಾದಲ್ಲಿ ತೀವ್ರ ಆಕ್ಷೇಪ ವ್ಯಕ್ತಪಡಿಸುತ್ತಿರುವ ಕಾಂಗ್ರೆಸ್‌ ಮುಖಂಡರ ಮನವೊಲಿಸಲು ನೀವು ಮುಂದಾಗಿ’ ಎಂದು ಬಿಜೆಪಿ ಸದಸ್ಯರು ಕೋರಿದರು.

ADVERTISEMENT

2008ರಲ್ಲಿ ಪ್ರಧಾನಿಯಾಗಿದ್ದ ಮನಮೋಹನ ಸಿಂಗ್‌ ಅವರು, ‘ಮಹದಾಯಿ ನದಿ ನೀರು ಹಂಚಿಕೆ ಕುರಿತಂತೆ ಸಂಧಾನ ಸಾಧ್ಯವಿಲ್ಲ’ ಎಂದು ಸುಪ್ರೀಂ ಕೋರ್ಟ್‌ಗೆ ಹೇಳಿಕೆ ನೀಡಿದ್ದಾಗಿ ಧಾರವಾಡ ಸಂಸದ, ಬಿಜೆಪಿಯ ಪ್ರಹ್ಲಾದ್‌ ಜೋಶಿ ಟೀಕಿಸಿದರು.

ಮುಂದೂಡಿಕೆ: ಮಹದಾಯಿ ನದಿ ನೀರು ಹಂಚಿಕೆ ಕುರಿತ ಅಂತಿಮ ಹಂತದ ವಿಚಾರಣೆಯನ್ನು ಮಹದಾಯಿ ಜಲವಿವಾದ ನ್ಯಾಯಮಂಡಳಿಯು ಫೆಬ್ರುವರಿ 8ಕ್ಕೆ ಮುಂದೂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.