ಶ್ರೀನಗರ: ಇಲ್ಲಿನ ಆಸ್ಪತ್ರೆಯಲ್ಲಿ ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದ ಉಗ್ರ ನವೀದ್ ಜಾಟ್ ಬೈಕಿನಲ್ಲಿ ಪರಾರಿಯಾಗುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಈ ಸಂಬಂಧದ ವಿಡಿಯೊ ಪೊಲೀಸರಿಗೆ ಲಭ್ಯವಾಗಿದೆ.
ಅಲ್ಲದೇ ಈ ದಾಳಿ ಸಂಬಂಧ ನಾಲ್ಕು ಮಂದಿಯನ್ನು ಬಂಧಿಸಲಾಗಿದೆ. ಐದನೇ ಆರೋಪಿಗಾಗಿ ಹುಡುಕಾಟ ಮುಂದುವರೆದಿದೆ ಎಂದು ಪೊಲೀಸರು ಹೇಳಿದ್ದಾರೆ.
ಲಷ್ಕರ್–ಎ–ತಯೆಬಾ ಈ ದಾಳಿಯ ಹೊಣೆ ಹೊತ್ತಿದೆ. ಲಭ್ಯವಾದ ದೃಶ್ಯಾವಳಿಯನ್ನು ಆಧರಿಸಿ ಜಮ್ಮು ಕಾಶ್ಮೀರ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.