ADVERTISEMENT

ಭಾರತದ ಮುಸ್ಲಿಮರನ್ನು ಪಾಕಿಸ್ತಾನಿ ಎನ್ನುವವರನ್ನು ಶಿಕ್ಷಿಸಲು ಕಾನೂನು ರೂಪಿಸಿ: ಓವೈಸಿ ಆಗ್ರಹ

ಏಜೆನ್ಸೀಸ್
Published 8 ಫೆಬ್ರುವರಿ 2018, 12:18 IST
Last Updated 8 ಫೆಬ್ರುವರಿ 2018, 12:18 IST
ಅಸಾದುದ್ದೀನ್ ಓವೈಸಿ (ಸಂಗ್ರಹ ಚಿತ್ರ)
ಅಸಾದುದ್ದೀನ್ ಓವೈಸಿ (ಸಂಗ್ರಹ ಚಿತ್ರ)   

ನವದೆಹಲಿ: ಭಾರತದ ಮುಸ್ಲಿಮರನ್ನು ಪಾಕಿಸ್ತಾನಿ ಎಂದು ಕರೆಯುವವರಿಗೆ ಮೂರು ವರ್ಷ ಜೈಲು ಶಿಕ್ಷೆ ವಿಧಿಸುವ ಕಾನೂನು ರೂಪಿಸಬೇಕು ಎಂದು ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೇಹಾದುಲ್ ಮುಸ್ಲಿಮೀನ್ (ಎಐಎಂಐಎಂ) ನಾಯಕ, ಸಂಸದ ಅಸಾದುದ್ದೀನ್ ಓವೈಸಿ ಆಗ್ರಹಿಸಿದ್ದಾರೆ.

ಲೋಕಸಭೆಯಲ್ಲಿ ಮಾತನಾಡಿದ ಅವರು ತ್ರಿವಳಿ ತಲಾಕ್ ಮಸೂದೆ ‘ಮಹಿಳಾ ವಿರೋಧಿ’ ಎಂದು ಅಭಿಪ್ರಾಯಪಟ್ಟಿದ್ದಾರೆ.

ಭಾರತದಲ್ಲಿ ವಾಸಿಸುತ್ತಿರುವ ಮುಸ್ಲಿಮರು ಮೊಹಮ್ಮದ್ ಅಲಿ ಜಿನ್ನಾ ಅವರ ‘ಎರಡು ದೇಶ’ ಸಿದ್ಧಾಂತವನ್ನು ತಿರಸ್ಕರಿಸಿದ್ದರು ಎಂದೂ ಓವೈಸಿ ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.