ADVERTISEMENT

ರಾಜ್ಯದ 29 ಬಿ.ಇಡಿ ಕಾಲೇಜುಗಳ ಮಾನ್ಯತೆ ರದ್ದು

ಏಜೆನ್ಸೀಸ್
Published 8 ಫೆಬ್ರುವರಿ 2018, 13:57 IST
Last Updated 8 ಫೆಬ್ರುವರಿ 2018, 13:57 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ:‌ ಕರ್ನಾಟಕದ 29, ಮಹಾರಾಷ್ಟ್ರದ 28, ತಮಿಳುನಾಡಿನ 20 ಮತ್ತು ಮಧ್ಯಪ್ರದೇಶದ 17 ಸೇರಿದಂತೆ ದೇಶದ ಒಟ್ಟು 133 ಬಿ.ಇಡಿ ಕಾಲೇಜುಗಳ ಮಾನ್ಯತೆಯನ್ನು ರದ್ದುಗೊಳಿಸಲಾಗಿದೆ ಎಂದು ರಾಜ್ಯಸಭೆಗೆ ಗುರುವಾರ ಕೇಂದ್ರ ಸರ್ಕಾರ ತಿಳಿಸಿದೆ.

ರಾಷ್ಟ್ರೀಯ ಶಿಕ್ಷಕರ ಶಿಕ್ಷಣ ಮಂಡಳಿ(ಎನ್‌ಸಿಟಿಇ) ಕಾಯ್ದೆಯ ನಿಯಮ ಮತ್ತು ಮಾನದಂಡಗಳನ್ನು ಪಾಲಿಸದೇ ಇರುವ ಕಾರಣ ಈ ಕ್ರಮ ಕೈಗೊಳ್ಳಲಾಗಿದೆ.

‘2016–17ನೇ ಶೈಕ್ಷಣಿಕ ಅವಧಿಯಲ್ಲಿ ಈ ಕಾಲೇಜುಗಳಿಗೆ ನೀಡಲಾಗಿರುವ ಮಾನ್ಯತೆಯನ್ನು ಎನ್‌ಸಿಟಿಇ ರದ್ದುಪಡಿಸಿದೆ’ ಎಂದು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಖಾತೆಯ ರಾಜ್ಯ ಸಚಿವ ಉಪೇಂದ್ರ ಕುಶ್ವಾಹ ಅವರು ಮಾಹಿತಿ ನೀಡಿದ್ದಾರೆ.

ADVERTISEMENT

ಹೊಸ ಬಿ.ಇಡಿ ಕಾಲೇಜುಗಳಿಗೆ ಅನುಮತಿ ನೀಡುವುದಿಲ್ಲ ಎಂದು ಕಳೆದ ವರ್ಷವಷ್ಟೇ ಕೇಂದ್ರ ಸರ್ಕಾರ ಘೋಷಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.