ADVERTISEMENT

ಬಾಡಿಗೆ ತಾಯಿಯಿಂದ ಮಗು ಪಡೆಯುವ ಮಹಿಳೆಗೆ ಆರು ತಿಂಗಳು ರಜೆ

ಪಿಟಿಐ
Published 8 ಫೆಬ್ರುವರಿ 2018, 19:54 IST
Last Updated 8 ಫೆಬ್ರುವರಿ 2018, 19:54 IST

ನವದೆಹಲಿ: ಬಾಡಿಗೆ ತಾಯಿಯಿಂದ ಮಗು ಪಡೆಯುವ ಕೇಂದ್ರ ಸರ್ಕಾರದ ಮಹಿಳಾ ಉದ್ಯೋಗಿಗಳಿಗೂ ಆರು ತಿಂಗಳು ಸಂಬಳ ಸಹಿತ ಹೆರಿಗೆ ರಜೆ ನೀಡಲಾಗುವುದು ಎಂದು ಸಿಬ್ಬಂದಿ ಸಚಿವಾಲಯ ಹೇಳಿದೆ.

ದೆಹಲಿ ಹೈಕೋರ್ಟ್ 2015ರಲ್ಲಿ ನೀಡಿದ ಆದೇಶದ ಅನ್ವಯ ಕೇಂದ್ರ ಸರ್ಕಾರವು ಎಲ್ಲ ಇಲಾಖೆಗಳಿಗೂ ಪತ್ರ ಬರೆದಿದೆ. ‘ಸಂಬಂಧಿಸಿದ ಅಧಿಕಾರಿಗಳಿಗೆ ಈ ವಿಚಾರವಾಗಿ ಸೂಕ್ತ ತಿಳಿವಳಿಕೆ ನೀಡಬೇಕು’ ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಹೈಕೋರ್ಟ್ ಆದೇಶವೇನು?: ಕೇಂದ್ರೀಯ ವಿದ್ಯಾಲಯದ ಶಿಕ್ಷಕಿಯೊಬ್ಬರು ಬಾಡಿಗೆ ತಾಯಿಯ ಮೂಲಕ ಅವಳಿ ಮಕ್ಕಳನ್ನು ಪಡೆದಿದ್ದರು. ಆದರೆ ಸ್ವತಃ ತಾವು ಮಕ್ಕಳನ್ನು ಹೆರದ ಕಾರಣಕ್ಕೆ ಅವರಿಗೆ ಹೆರಿಗೆ ರಜೆ ಸಿಕ್ಕಿರಲಿಲ್ಲ.

ADVERTISEMENT

ಈ ಪ್ರಕರಣಕ್ಕೆ ಸಂಬಂಧಿಸಿ, ‘ಬಾಡಿಗೆ ತಾಯಿಯ ಮೂಲಕ ಮಗುವನ್ನು ಪಡೆಯುವ ಮಹಿಳಾ ಉದ್ಯೋಗಿಯೂ (ನಿಯೋಜಿತ ತಾಯಿ) ಹೆರಿಗೆ ರಜೆಗೆ ಅರ್ಹರಾಗಿರುತ್ತಾರೆ’ ಎಂದು ನ್ಯಾಯಾಲಯ ತೀರ್ಪು ನೀಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.