ADVERTISEMENT

ಚುನಾವಣಾ ಆಯೋಗ, ಗೋವಾ ಸ್ಪೀಕರ್‌ಗೆ ಸುಪ್ರೀಂ ಕೋರ್ಟ್ ನೋಟಿಸ್

ಪಿಟಿಐ
Published 9 ಫೆಬ್ರುವರಿ 2018, 19:47 IST
Last Updated 9 ಫೆಬ್ರುವರಿ 2018, 19:47 IST
ಚುನಾವಣಾ ಆಯೋಗ, ಗೋವಾ ಸ್ಪೀಕರ್‌ಗೆ  ಸುಪ್ರೀಂ ಕೋರ್ಟ್ ನೋಟಿಸ್
ಚುನಾವಣಾ ಆಯೋಗ, ಗೋವಾ ಸ್ಪೀಕರ್‌ಗೆ ಸುಪ್ರೀಂ ಕೋರ್ಟ್ ನೋಟಿಸ್   

ನವದೆಹಲಿ: ಗೋವಾ ಆರೋಗ್ಯ ಸಚಿವ ವಿಶ್ವಜಿತ್ ರಾಣೆ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕೆಂದು ಕೋರಿ ಕಾಂಗ್ರೆಸ್ ಸಲ್ಲಿಸಿದ್ದ ಅರ್ಜಿಗೆ ಪ್ರತಿಕ್ರಿಯಿಸುವಂತೆ, ಚುನಾವಣಾ ಆಯೋಗ ಹಾಗೂ ಗೋವಾ ಸ್ಪೀಕರ್‌ಗೆ ಸುಪ್ರೀಂ ಕೋರ್ಟ್ ಶುಕ್ರವಾರ ನೋಟಿಸ್ ನೀಡಿದೆ.

ಅರ್ಜಿಗೆ ಸಂಬಂಧಿಸಿ ಆರು ವಾರಗಳ ಒಳಗೆ ಪ್ರತಿಕ್ರಿಯೆ ದಾಖಲಿಸಬೇಕು ಎಂದು ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ನ್ಯಾಯಪೀಠ ಸೂಚಿಸಿದೆ.

ರಾಣೆ ಅವರು ತಮ್ಮ ಪಕ್ಷದ ಟಿಕೆಟ್‌ನಿಂದ ಶಾಸಕರಾಗಿ ಚುನಾಯಿತರಾಗಿದ್ದರು. ಆದರೆ ಮನೋಹರ ಪರ್ರೀಕರ್ ನೇತೃತ್ವದ ಸರ್ಕಾರ ಬಹುಮತ ಸಾಬೀತುಪಡಿಸುವ ಮೊದಲೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದಾರೆ. ಸ್ಪೀಕರ್ ಸಹ ತಪ್ಪಾಗಿ ರಾಣೆ ಅವರ ರಾಜೀನಾಮೆ ಅಂಗೀಕರಿಸಿದ್ದಾರೆ ಎಂದು ಕಾಂಗ್ರೆಸ್ ಪಕ್ಷ ತನ್ನ ಅರ್ಜಿಯಲ್ಲಿ ಉಲ್ಲೇಖಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.