ADVERTISEMENT

‘ತ್ರಿವಳಿ ತಲಾಖ್ ನಿಷೇಧ ಮಸೂದೆ ಅಪಾಯಕಾರಿ’

​ಪ್ರಜಾವಾಣಿ ವಾರ್ತೆ
Published 10 ಫೆಬ್ರುವರಿ 2018, 19:30 IST
Last Updated 10 ಫೆಬ್ರುವರಿ 2018, 19:30 IST
‘ತ್ರಿವಳಿ ತಲಾಖ್ ನಿಷೇಧ ಮಸೂದೆ ಅಪಾಯಕಾರಿ’
‘ತ್ರಿವಳಿ ತಲಾಖ್ ನಿಷೇಧ ಮಸೂದೆ ಅಪಾಯಕಾರಿ’   

ಹೈದರಾಬಾದ್: ಮುಸ್ಲಿಂ ವೈಯಕ್ತಿಕ ಕಾನೂನುಗಳಲ್ಲಿ ಕೇಂದ್ರ ಸರ್ಕಾರ ಅನಗತ್ಯವಾಗಿ ಮೂಗು ತೂರಿಸುತ್ತಿದೆ ಎಂದು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ (ಎಐಎಂಪಿಎಲ್‌ಬಿ) ಆರೋಪಿಸಿದೆ.

‘ಮುಸ್ಲಿಂ ವೈಯಕ್ತಿಕ ಕಾನೂನಿಗೆ ತ್ರಿವಳಿ ತಲಾಖ್ ನಿಷೇಧ ಮಸೂದೆ ಅಪಾಯಕಾರಿಯಾಗಿದ್ದು, ಅದು ಜಾರಿಯಾಗದಂತೆ ತಡೆಯಬೇಕಿದೆ’ ಎಂದು ಮಂಡಳಿ ಪ್ರಧಾನ ಕಾರ್ಯದರ್ಶಿ ಮೌಲಾನ ವಲಿ ರೆಹಮಾನಿ ಅಭಿಪ್ರಾಯಪಟ್ಟಿದ್ದಾರೆ.

ಎಐಎಂಪಿಎಲ್‌ಬಿ 26ನೇ ಸಮಾವೇಶದಲ್ಲಿ ಶನಿವಾರ ವರದಿ ಮಂಡಿಸಿದ ಅವರು, ತ್ರಿವಳಿ ತಲಾಖ್‌ ಮಸೂದೆ ಕುರಿತು ರಾಜ್ಯಸಭೆ
ಯಲ್ಲಿ ವಿರೋಧ ಪಕ್ಷಗಳು ತಳೆದಿರುವ ನಿಲುವನ್ನು ಪ್ರಶಂಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.