ADVERTISEMENT

ಜನಸಂಖ್ಯೆ ನಿಯಂತ್ರಣ: ‘ಸುಪ್ರೀಂ’ಗೆ ಪಿಐಎಲ್‌

ಪಿಟಿಐ
Published 18 ಫೆಬ್ರುವರಿ 2018, 19:30 IST
Last Updated 18 ಫೆಬ್ರುವರಿ 2018, 19:30 IST

ನವದೆಹಲಿ: ‘ಒಂದು ಕುಟುಂಬಕ್ಕೆ ಎರಡು ಮಕ್ಕಳು ಮಾತ್ರ’ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸಲು ಆದೇಶಿಸುವಂತೆ ಕೋರಿ ಸುಪ್ರೀಂಕೋರ್ಟ್‌ಗೆ ಮೂರು ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಸಲ್ಲಿಸಲಾಗಿದೆ.

ವಕೀಲರಾದ ಅನುಜ್‌ ಸಕ್ಸೇನಾ, ಪೃಥ್ವಿ ರಾಜ್‌ ಚೌಹಾಣ್‌ ಮತ್ತು ಪ್ರಿಯಾ ಶರ್ಮ ಅವರು ಈ ಅರ್ಜಿಗಳನ್ನು ಸಲ್ಲಿಸಿದ್ದಾರೆ. ಜನಸಂಖ್ಯೆ ನಿಯಂತ್ರಣದ ದೃಷ್ಟಿಯಿಂದ ಇಂಥದ್ದೊಂದು ಆದೇಶ ಅತಿ ಜರೂರಾಗಿದ್ದು, ಇದನ್ನು ಪಾಲನೆ ಮಾಡದವರಿಗೆ ಕಠಿಣ ಶಿಕ್ಷೆ ವಿಧಿಸುವ ಬಗ್ಗೆ ಆದೇಶಿಸುವಂತೆ ಅವರು ಕೋರಿದ್ದಾರೆ.

‘ಇದೇ ರೀತಿ ಜನಸಂಖ್ಯೆ ಹೆಚ್ಚುತ್ತಾ ಹೋದರೆ 2022ರ ವೇಳೆಗೆ ಭಾರತದ ಜನಸಂಖ್ಯೆ 150ಕೋಟಿ ಮೀರುವ ಸಾಧ್ಯತೆ ಇದೆ. ಇದರಿಂದ ನಿರುದ್ಯೋಗ, ಬಡತನ, ಅನಾರೋಗ್ಯ ಸಮಸ್ಯೆಗಳು ಹೆಚ್ಚುತ್ತವೆ. ಇದಕ್ಕೆಲ್ಲಾ ಕಡಿವಾಣ ಹಾಕಬೇಕೆಂದರೆ ಜನಸಂಖ್ಯೆ ನಿಯಂತ್ರಣ ಆಗಲೇಬೇಕಿದೆ. ಆದ್ದರಿಂದ ಈ ನಿಟ್ಟಿನಲ್ಲಿ ಕಠಿಣ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಆದೇಶಿಸಬೇಕು’ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.