
ಪ್ರಜಾವಾಣಿ ವಾರ್ತೆ
ಹೈದರಾಬಾದ್: ತೆಲುಗು ಚಿತ್ರರಂಗದ ಪ್ರಸಿದ್ಧ ಹಾಸ್ಯನಟ ಗುಂಡು ಹನುಮಂತರಾವ್ (61) ಸೋಮವಾರ ಬೆಳಗಿನ ಜಾವ ನಿಧನರಾಗಿದ್ದಾರೆ. ಅವರಿಗೆ ಮಗ ಇದ್ದಾರೆ.
ಕಿಡ್ನಿ ತೊಂದರೆಯಿಂದ ಬಳಲುತ್ತಿದ್ದ ಅವರು ಡಯಾಲಿಸಿಸ್ ಚಿಕಿತ್ಸೆ ಪಡೆಯುತ್ತಿದ್ದರು. ಇವರು ವಿಜಯವಾಡದವರು. 1987ರಲ್ಲಿ ತೆರೆಕಂಡ ‘ಆಹಾ ನಾ ಪೆಲ್ಲಂತ’ ಅವರು ನಟಿಸಿದ ಮೊದಲ ಸಿನಿಮಾ. ‘ರಾಜೇಂದ್ರುಡು ಗಂಜೇಂದ್ರುಡು’ ಮತ್ತು ‘ಯಮಲೀಲಾ’ ಸೇರಿದಂತೆ ಸುಮಾರು 400 ಸಿನಿಮಾಗಳಲ್ಲಿ ನಟಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.