ADVERTISEMENT

ನೀರವ್‌ ಮೋದಿ–ಮೆಹುಲ್‌ ಚೋಕ್ಸಿ ಒಡೆತನಕ್ಕೆ ಸೇರಿದ 9 ಐಷಾರಾಮಿ ಕಾರುಗಳು ಜಪ್ತಿ

ಏಜೆನ್ಸೀಸ್
Published 22 ಫೆಬ್ರುವರಿ 2018, 10:45 IST
Last Updated 22 ಫೆಬ್ರುವರಿ 2018, 10:45 IST
ಸಂಗ್ರಹ ಚಿತ್ರ.
ಸಂಗ್ರಹ ಚಿತ್ರ.   

ನವದೆಹಲಿ: ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ಗೆ ₹11,344 ಕೋಟಿ ವಂಚನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನೀರವ್‌ ಮೋದಿ–ಮೆಹುಲ್‌ ಚೋಕ್ಸಿ ಒಡೆತನಕ್ಕೆ ಸೇರಿದ ಒಂಬತ್ತು ಐಷಾರಾಮಿ ಕಾರುಗಳನ್ನು ಗುರುವಾರ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು  ಜಪ್ತಿ ಮಾಡಿದ್ದಾರೆ.

ಜಪ್ತಿ ಮಾಡಿರುವ ಕಾರುಗಳಲ್ಲಿ ರೋಲ್ಸ್ ರಾಯ್ಸ್ ಘೋಸ್ಟ್‌, ಪೋರ್ಷೆ ಪನಮೆರಾ, 2 ಮರ್ಸಿಡೀಸ್ ಬೆಂಜ್, ಜಿಎಲ್‌ ಕ್ಲಾಸ್‌, ಮೂರು ಹೋಂಡಾ ಕಾರುಗಳು ಸೇರಿವೆ.

ಮುಂಬೈ ಬಳಿಯ ಅಲಿಬಾಗ್‌ನಲ್ಲಿರುವ ನೀರವ್‌ ಮೋದಿಯ ₹32 ಕೋಟಿ ವೆಚ್ಚದ ಐಷಾರಾಮಿ ತೋಟದ ಮನೆಯನ್ನು ಸಿಬಿಐ ಅಧಿಕಾರಿಗಳು ಬುಧವಾರ ಬೀಗ ಜಡಿದಿದ್ದರು.

ADVERTISEMENT

ಮತ್ತೊಂದೆಡೆ ಮುಂಬೈನ ನಾಲ್ಕು ಶೆಲ್‌ ಕಂಪನಿ ಸೇರಿದಂತೆ ದೇಶದ 17 ಕಡೆಗಳಲ್ಲಿ  ಹೊಸದಾಗಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶೋಧ ಕಾರ್ಯಕೈಗೊಂಡಿದ್ದಾರೆ.

ಎಂಟು ದಿನಗಳಿಂದ ಅಧಿಕಾರಿಗಳು ನಡೆಸುತ್ತಿರುವ ಶೋಧ ಕಾರ್ಯ ಇನ್ನೂ ಮುಂದುವರಿದಿದೆ. ಆಪಾರ ಪ್ರಮಾಣದ ಚಿನ್ನಾಭರಣ, ನಗದು ಮತ್ತು ಆಸ್ತಿಯನ್ನು ವಶಪಡಿಸಿಕೊಂಡಿದ್ದಾರೆ.

ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಅಡಿ ಜಾರಿ ನಿರ್ದೇಶನಾಲಯ ನೀರವ್‌ ಮೋದಿಯ 36ಕ್ಕೂ ಹೆಚ್ಚು ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳುವ ಸಾಧ್ಯತೆ ಇದೆ.

ಇದನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.